Untitled Document
Sign Up | Login    
Dynamic website and Portals
  
June 25, 2015

ತುರ್ತು ಪರಿಸ್ಥಿತಿಗೆ 40 ವರ್ಷ: ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರಧಾನಿ ಕರೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ (ಫೈಲ್ ಚಿತ್ರ) ಪ್ರಧಾನ ಮಂತ್ರಿ ನರೇಂದ್ರ ಮೋದಿ (ಫೈಲ್ ಚಿತ್ರ)

ನವದೆಹಲಿ : 1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 40 ವರ್ಷ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭವು ಒಂದು ಕರಾಳ ಅಧ್ಯಾಯವಾಗಿದೆ. ಇಂದು ಪ್ರಜಾಪ್ರಭುತ್ವ ವ್ಯವಸ್ಥೆಯ ಆದರ್ಶಗಳು ಮತ್ತು ತತ್ವಗಳನ್ನು ಬಲಪಡಿಸಲು ನಾವೆಲ್ಲರೂ ಪ್ರಯತ್ನಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ಪಟ್ಟಿದ್ದಾರೆ.

ಭಾರತದ ಪ್ರಜಾಪ್ರಭುತ್ವ ಇತಿಹಾಸದ ಒಂದು ಕರಾಳ ಘಟ್ಟಕ್ಕೆ ಇಂದಿಗೆ 40 ವರ್ಷಗಳಾಗಿದ್ದು, ಅಂದು ರಾಜಕೀಯ ನಾಯಕತ್ವ ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಗತಿಪರವಾದ ಪ್ರಜಾಪ್ರಭುತ್ವದ ಅವಶ್ಯಕತೆ ಇದೆ. ಪ್ರಜಾಪ್ರಭುತ್ವವನ್ನು ಬಲಪಡಿಸಲು ನಾವು ನಮ್ಮ ಶಕ್ತಿಮೀರಿ ಪ್ರಯತ್ನಿಸಬೇಕು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಹೋರಾಟ ನಡೆಸಿದ ಲಕ್ಷಾಂತರ ಜನರನ್ನು ನಾವು ನೆನೆಯಬೇಕು. ಅವರ ಪ್ರಯತ್ನದ ಫಲವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿದೆ. ಜಯಪ್ರಕಾಶ್ ನಾರಾಯಣ್ ಅವರ ಕರೆಯ ಮೇರೆಗೆ ಸಹಸ್ರಾರು ಜನರು ಹೋರಾಟದಲ್ಲಿ ಭಾಗವಹಿಸಿ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದರು ಎಂದು ಮೋದಿ ತಿಳಿಸಿದ್ದಾರೆ.

1975ರಲ್ಲಿ ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಭಾರತದ ಮೇಲೆ ತುರ್ತ ಪರಿಸ್ಥಿತಿಯನ್ನು ಹೇರಿದ್ದರು. ತುರ್ತು ಪರಿಸ್ಥಿತಿ ವಿರುದ್ಧ ದೇಶಾದ್ಯಂತ ಸಾಕಷ್ಟು ಚಳುವಳಿಗಳು ನಡೆದ ಪರಿಣಾಮ 2 ವರ್ಷಗಳ ನಂತರ ತುರ್ತು ಪರಿಸ್ಥಿತಿಯನ್ನು ಹಿಂಪಡೆಯಲಾಗಿತ್ತು.

ಆ ನಂತರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಇಂದಿರಾ ಗಾಂಧಿ ಸಮೇತ ಕಾಂಗ್ರೆಸ್ ಪಕ್ಷ ನೆಲ ಕಚ್ಚಿತ್ತು ಹಾಗೂ ಜನತಾ ಪಕ್ಷ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಮೊರಾರ್ಜಿ ದೇಸಾಯಿ ಪ್ರಧಾನಿ ಆದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited