Untitled Document
Sign Up | Login    
Dynamic website and Portals
  
June 26, 2015

ಅರ್ಥವ್ಯವಸ್ಥೆಯನ್ನು ಸೂಕ್ಷ್ಮವಾಗಿ ನಿರ್ವಹಿಸದಿದ್ದರೆ ಮಹಾ ಕುಸಿತ ಸಾಧ್ಯತೆ

ಲಂಡನ್ : ನೀತಿ-ನಿಯಮಾವಳಿಗಳನ್ನು ಬದಲಾಯಿಸುವಂತೆ ವಿಶ್ವದ ಎಲ್ಲ ಬ್ಯಾಂಕ್‌ ಗಳಿಗೆ ಕರೆ ನೀಡಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌.ಬಿ.ಐ) ಗವರ್ನರ್ ರಘುರಾಮ್ ರಾಜನ್, ಸ್ವಲ್ಪ ಯಾಮಾರಿದರೂ ಜಾಗತಿಕ ಅರ್ಥ ವ್ಯವಸ್ಥೆ 1930ರ ದಶಕದಂತಹ ಮಹಾ ಕುಸಿತ ಕಾಣುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಲಂಡನ್ ಬಿಸಿನೆಸ್ ಸ್ಕೂಲ್ (ಎಲ್‌ಬಿಎಸ್)ನಲ್ಲಿ ನಡೆದ ಅಂತಾರಾಷ್ಟ್ರೀಯ ಅರ್ಥತಜ್ಞರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರೀಯ ಬ್ಯಾಂಕ್‌ ಗಳು ತಮ್ಮ ಸ್ಪರ್ಧಾತ್ಮಕ ಆರ್ಥಿಕ ನೀತಿಗಳನ್ನು ಸರಳಗೊಳಿಸುವುದರ ವಿರುದ್ಧ ಎಚ್ಚರಿಸಿದ್ದಾರೆ. ಭಾರತದಲ್ಲಿನ ಪರಿಸ್ಥಿತಿಗಳು ಮಾತ್ರ ತೀರ ಭಿನ್ನವಾಗಿದ್ದು, ಫಿಕ್ಸೆಡ್ ಠೇವಣಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಡ್ಡಿ ದರವನ್ನು ಕಡಿತಗೊಳಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಒಟ್ಟಾರೆ, ಅರ್ಥವ್ಯವಸ್ಥೆಯನ್ನು ಸೂಕ್ಷ್ಮವಾಗಿ ನಿರ್ವಹಿಸದಿದ್ದರೆ, ನಿಜಕ್ಕೂ ಅಂತಾರಾಷ್ಟ್ರೀಯ ವಿತ್ತೀಯ ಸ್ಥಿತಿ-ಗತಿಗಳು 1930ರ ದಶಕದಲ್ಲಿ ಉಂಟಾಗಿದ್ದ ಕುಸಿತ ಅನುಭವಿಸುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಇದನ್ನು ತಡೆಯಲು ಅಂತಾರಾಷ್ಟ್ರೀಯ ಸಮುದಾಯದಲ್ಲಿ ಒಮ್ಮತದ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಈ ಸಮಸ್ಯೆ ಪರಿಹಾರಕ್ಕೆ ಒಂದು ಸೂಕ್ತ ಮಾರ್ಗೋಪಾಯವನ್ನು ನಾವು ಅನ್ವೇಷಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಅರ್ಥ ನೀತಿಗಳು ಯಾವ ದಾರಿಯಲ್ಲಿ ಸಾಗಬೇಕು ಎಂಬುದನ್ನು ನಿರ್ಧರಿಸುವ ಕಾಲ ಸನ್ನಿಹಿತವಾಗಿದೆ. ಈ ಬಗ್ಗೆ ಕೇಂದ್ರೀಯ ಬ್ಯಾಂಕ್‌ ಗಳು ಸರಿಯಾದ ಮಾರ್ಗವೊಂದನ್ನು ಕಂಡುಕೊಳ್ಳಬೇಕಾಗಿದೆ ಎಂದು ರಾಜನ್ ಅಂತಾರಾಷ್ಟ್ರೀಯ ಸಮುದಾಯಕ್ಕೆ ಸಲಹೆ ನೀಡಿದರು.

ಯಾವ ರೀತಿ ಕಾನೂನು, ನೀತಿ-ನಿಯಮಾವಳಿಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲೇ ಚರ್ಚೆಯಾಗಿ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited