Untitled Document
Sign Up | Login    
Dynamic website and Portals
  
June 29, 2015

ವಿಧಾನಮಂಡಲ ಅಧಿವೇಶನ: ರೈತರ ಆತ್ಮಹತ್ಯೆ ಪ್ರಕರಣ ಪ್ರತಿಧ್ವನಿ

ಮೊದಲ ದಿನವೇ ಗದ್ದಲ-ಕೋಲಾಹಲಕ್ಕೆ ಕಾರಣವಾದ ಕಲಾಪ

ಬೆಳಗಾವಿ : ರಾಜ್ಯದಲ್ಲಿ ಮುಂದುವರೆದಿರುವ ರೈತರ ಆತ್ಮಹತ್ಯೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಮೊದಲದಿನ ಅಧಿವೇಶನದಲ್ಲಿ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಯಿತು. ಸದನ ಆರಂಭವಾಗುತ್ತಿದ್ದಂತೆಯೇ ಮಾಜಿ ಶಾಸಕರಾದ ವಿಠ್ಠಲ ರಾವ್ ಯಶವಂತರಾವ್ ಚವ್ಹಾಣ್ ಹಾಗೂ ವೀರಭದ್ರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಬಳಿಕ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯ ಸರ್ಕಾರ ರೈತರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ನಿರ್ಲಕ್ಷತನದಿಂದಾಗಿಯೇ ದಿನದಿಂದ ದಿನಕ್ಕೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಒಂದೇ ಕ್ಷಣವೂ ಅಧಿಕಾರದಲ್ಲಿರಬಾರದು . ಅಧಿಕಾರದಲ್ಲಿರಲು ಕಾಂಗ್ರೆಸ್ಸ್ ಸರ್ಕಾರಕ್ಕೆ ನೈತಿಕತೆಯಿಲ್ಲ. ಕಬ್ಬಿನ ಬಾಕಿ ಹಣ ಕೊಡಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಮಧ್ಯಪ್ರವೇಶಿಸಿದ ಸಚಿವರಾದ ಟಿ.ಬಿ.ಜಯಚಂದ್ರ ಹಾಗೂ ಆರ್.ವಿ.ದೇಶಪಾಂಡೆ, ನಾವು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದೇವೆ. ಕಾಂಗ್ರೆಸ್ ಆಡಳಿತದ ಬಗ್ಗೆ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದರು.

ಈ ಈವರೆಗೂ ಯಾವ ಕ್ರಮಗಳನ್ನು ಕೈಗೊಂಡಿದ್ದೀರಿ. ಕೇವಲ ಭರವಸೆಗಳನ್ನು ನೀಡುತ್ತಿದ್ದೀರಿ. ಸಿಎಂ ಮಾತುಗಳಿಂದ ರೈತರ ಹೊಟ್ಟೆ ತುಂಬುವುದಿಲ್ಲ ಎಂದು ನಿಲುವಳಿ ಸೂಚನೆ ಮಂಡನೆಗೆ ಸಿದ್ಧತೆ ನಡೆಸಿದರು. ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited