Untitled Document
Sign Up | Login    
Dynamic website and Portals
  
June 29, 2015

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ:ನ್ಯಾ.ಭಾಸ್ಕರ್ ರಾವ್ ಪುತ್ರನ ವಿರುದ್ಧ ದೂರು

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ:ನ್ಯಾ.ಭಾಸ್ಕರ್ ರಾವ್ ಪುತ್ರನ ವಿರುದ್ಧ ದೂರು

ಬೆಂಗಳೂರು : ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ,ಭಾಸ್ಕರ್ ರಾವ್ ಅವರ ಸಂಬಂಧಿಗಳೇ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಲೋಕಾಯುಕ್ತದಲ್ಲಿ ಭ್ರಷ್ಚಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸೂಕ್ತ ತನಿಖೆಗೆ ಆಗ್ರಹಿಸಿ ಹೋರಾಟ ಮುಂದುವರೆಸಿದರುವ ರಾಜ್ಯ ಆಮ್ ಆದ್ಮಿ ಪಕ್ಷ ಪ್ರಕರಣ ಸಂಬಂಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಲೋಕಾಯುಕ್ತ ಕಛೇರಿಯಲ್ಲಿ ಹಣದ ಬೇಡಿಕೆಯಿಟ್ಟಿದ್ದ ಎನ್ನಲಾದ ಕೃಷ್ಣರಾವ್ ಮತ್ತು ಲೋಕಾಯುಕ್ತರ ಪುತ್ರ ಅಶ್ವಿನ್ ರಾವ್ ವಿರುದ್ಧ ಆಪ್ ನಾಯಕ ರವಿಕೃಷ್ಣಾ ರೆಡ್ಡಿ ಮತ್ತು ಸಿದ್ಧಾಂತ್ ಶರ್ಮಾ ಅವರು ದೂರೂ ದಾಖಲಿಸಿದ್ದಾರೆ. ಲೋಕಾಯುಕ್ತರ ಅಧಿಕೃತ ನಿವಾಸವನ್ನು ಲಂಚ ಅವ್ಯವಹಾರ ನಡೆಸಲು ಬಳಸಿಕೊಂಡಿದ್ದಾರೆ ಎಂದು ಆಪಾದಿಸಲಾಗಿದೆ.

ಅಶ್ವಿನ್ ರಾವ್ ಮತ್ತು ಕೃಷ್ಣರಾವ್ ಎಂಬುವವರು ಹಿರಿಯ ಸರ್ಕಾರಿ ಅಧಿಕಾರಿಯನ್ನು ಲೋಕಾಯುಕ್ತರ ಅಧಿಕೃತ ನಿವಾಸಕ್ಕೆ ಕರೆಸಿಕೊಂಡು ಬೆದರಿಕೆ ಹಾಕಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪಗಳು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ನಡೆಯುತ್ತಿರುವ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ನಡೆಸಿ, ಸಂಸ್ಥೆಗೆ ಕಳಂಕ ತರುತ್ತಿರುವಂತಹ ಆರೋಪಿಗಳನ್ನು ಹಿಡಿದು ಶಿಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಇಂಜಿನಿಯರ್ ಕೃಷ್ಣಮೂರ್ತಿ ಎಂಬುವವರನ್ನು ಲೋಕಾಯುಕ್ತ ಕಚೇರಿಗೆ ಕರೆಸಿಕೊಂಡು ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ 2015ರ ಮೇ 11ರಂದು ಲೋಕಾಯುಕ್ತ ರಿಜಿಸ್ಟ್ರಾರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆಯೂ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited