Untitled Document
Sign Up | Login    
Dynamic website and Portals
  
July 2, 2015

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಮಾತಿಲ್ಲ : ಸಿದ್ದರಾಮಯ್ಯ

ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ವಕೀಲರಿಂದ ಪ್ರತಿಭಟನೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ವಕೀಲರಿಂದ ಪ್ರತಿಭಟನೆ

ಬೆಳಗಾವಿ : ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುರುವಾರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಕಲಾಪದ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಕೋಟಿ ರೂ. ಭ್ರಷ್ಟಾಚಾರದ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಿಲ್ಲ, ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ ಎಂದರು.

ಲೋಕಾಯುಕ್ತ ವಿಧೇಯಕಕ್ಕೆ ತಿದ್ದುಪಡಿ ಮಾಡುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಗ್ಗೆ ಕಾನೂನು ತಜ್ಞರ ಬಳಿ ಸಮಲೋಚನೆ ನಡೆಸಿ ನಂತರದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ವಕೀಲರು ಗುರುವಾರವೂ ಸಹ ಪ್ರತಿಭಟನೆ ನಡೆಸಿದ್ದರು. ಲೋಕಾಯುಕ್ತರ ರಾಜೀನಾಮೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಪ್ರತಿಪಕ್ಷದ ನಾಯಕರುಗಳು ಸಹ ಭ್ರಷ್ಟಾಚಾರದ ಪ್ರಕರಣದ ಬಗ್ಗೆ ಕಿಡಿಕಾರುತ್ತಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited