Untitled Document
Sign Up | Login    
Dynamic website and Portals
  
July 2, 2015

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಬೆಂಗಳೂರು : ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ/ಕಿರಿಯ ಸಹಾಯಕ/ದ್ವಿತೀಯ ದರ್ಜೆಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಹುದ್ದೆಗಳಿಗೆ ತಾತ್ಪೂರ್ತಿಕವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅಕ್ಟೋಬರ್ ೨೦೧೫ ರಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆನ್ ಲೈನ್ ಮೂಲಕ ಜುಲೈ 3 ರ ನಂತರ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ)
ವೆಬ್ ಸೈಟ್(http://www.kpsc.kar.nic.in) ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 1, 2015 ರಾತ್ರಿ 11.45. ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ ಆಗಸ್ಟ್ 3 2015.

ಅರ್ಜಿಯನ್ನು ಆನ್ ಲೈನ್ ಮೂಲಕ ಭರ್ತಿ ಮಾಡಿ ಪರೀಕ್ಷಾ ಶುಲ್ಕವನ್ನು ಕರ್ನಾಟಕ ರಾಜ್ಯದ ಯಾವುದೇ ಎಲೆಕ್ಟ್ರೋನಿಕ್ ಅಂಚೆ ಕಚೇರಿಗಳಲ್ಲಿ ಸಂದಾಯ ಮಾಡಬಹುದಾಗಿದೆ. ಶುಲ್ಕವನ್ನು ಪಾವತಿಸದೇ ಇರುವ ಅಭ್ಯರ್ಥಿಯ ಅರ್ಜಿಯನ್ನು ತಿರಸ್ಕರಿಸಲಾಗುವುದೆಂದು ಕೆಪಿಎಸ್‌ಸಿ ಪ್ರಕಟಣೆ ತಿಳಿಸಿದೆ.

ವಯೋಮಿತಿ: ಕನಿಷ್ಟ 18 ವರ್ಷ. ಸಾಮಾನ್ಯ ವರ್ಗದವರಿಗೆ 35 ವರ್ಷ. 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪ.ಜಾ/ಪ.ಪಂ-1ರ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ: ಸಹಾಯಕ/ ಪ್ರಥಮ ದರ್ಜೆಯ ಸಹಾಯಕರ ಹುದ್ದೆಗಳಿಗೆ ಯಾವುದೇ ವಿಶ್ವ ವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕಿರಿಯ ಸಹಾಯಕ/ ದ್ವಿತೀಯ ದರ್ಜೆಯ ಸಹಾಯಕ ಹುದ್ದೆಗಳಿಗೆ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ಪದವಿ ಪೂರ್ವ ಪರೀಕ್ಷೆ ಇಲಾಖೆಯು ನಡೆಸುವ ಪದವಿ ಪೂರ್ವ ಪರೀಕ್ಷೆ ಅಥವಾ ತತ್ಸಮಾನ ವಿದ್ಯಾರ್ಹತೆಗಳಾದ ಐಟಿಐ, ಮೂರು ವರ್ಷದ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು.

ಪರೀಕ್ಷ ಶುಲ್ಕ : ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂ.
ಪ್ರ.ಜಾ/ಪ.ಪಂ/ಪ್ರವರ್ಗ1/ ಅಂಗವಿಕಲರು/ ಮಾಜಿ ಸೈನಿಕರಿಗೆ 25 ರೂ ಶುಲ್ಕವಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited