Untitled Document
Sign Up | Login    
Dynamic website and Portals
  
July 2, 2015

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ (ಫೈಲ್ ಚಿತ್ರ) ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ (ಫೈಲ್ ಚಿತ್ರ)

ನವದೆಹಲಿ : ಹರ್ ಖೇತ್ ಕೊ ಪಾನಿ ಎಂಬ ಗುರಿಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮುಂದಿನ 5 ವರ್ಷಗಳಲ್ಲಿ ಯೋಜನೆಗೆ 50 ಸಾವಿರ ಕೋಟಿ ಹಣವನ್ನು ಬಳಸಿಕೊಳ್ಳಲಾಗುವುದು ಎಂದು ಜೇಟ್ಲಿ ತಿಳಿಸಿದರು. ಈ ವರ್ಷ ಈ ಯೋಜನೆಗೆ 5,300 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ.

ನೀರಿನ ಸಮರ್ಥ ಬಳಕೆ ಮೂಲಕ ಉತ್ಪಾದನೆಯನ್ನು ಹೆಚ್ಚಿಸುವುದು ಈ ಯೋಜನೆಯ ಮೂಲ ಉದ್ದೇಶ (more crop per drop). ನೀರಿನ ಸಮರ್ಥ ಬಳಕೆ ಮಾಡಿ ನೀರು ಪೋಲಾಗುವುದನ್ನು ತಡೆಯುವುದು, ನೀರಿನ ಸಂರಕ್ಷಣೆ, ಜಲ ಕುಹರಗಳ ಪುನರ್ಭರ್ತಿಕಾರ್ಯ, ನೀರಾವರಿ ವ್ಯವಸ್ಥೆಯಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವುದು ಈ ಯೋಜನೆಯ ಉದ್ದೇಶ.

ಕೇಂದ್ರದ ಮೇಲ್ವಿಚಾರಣೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ಮಾಡಿ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಒಪ್ಪಿಗೆ ಸೂಚಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited