Untitled Document
Sign Up | Login    
Dynamic website and Portals
  
July 9, 2015

ಉಗ್ರ ಲಖ್ವಿ ವಿಚಾರದಲ್ಲಿ ಚೀನಾ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೆಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ನಡುವೆ 85 ನಿಮಿಷಗಳ ಕಾಲ ಮಾತುಕತೆ

ಪ್ರಧಾನಿ ನರೆಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ  ಕ್ಸಿ ಜಿನ್ ಪಿಂಗ್ ಭೇಟಿ (ಚಿತ್ರ ಕೃಪೆ:www.pmindia.in) ಪ್ರಧಾನಿ ನರೆಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿ (ಚಿತ್ರ ಕೃಪೆ:www.pmindia.in)

ಉಫಾ : ಬ್ರಿಕ್ಸ್ ಹಾಗೂ ಶಾಂಘೈ ಸಹಕಾರಿ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ, ಸಂಜೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಾತುಕತೆ ನಡೆಸಿದರು.

ಪ್ರಧಾನಿ ನರೆಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ನಡುವೆ 85 ನಿಮಿಷಗಳ ಕಾಲ ನಡೆದ ಮಾತುಕತೆಯಲ್ಲಿ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಲಾಯಿತೆಂದು ಎಂದು ವಿದೇಶಾಂಗ ಕಾರ್ಯದರ್ಶಿ ಎಸ್ ಜಯಶಂಕರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಮಾತುಕತೆಯ ಸಂದರ್ಭದಲ್ಲಿ ಉಗ್ರ ಲಖ್ವಿ ಬಿಡುಗಡೆ ಮಾಡಿದ ಪಾಕಿಸ್ತಾನದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಿಶ್ವಸಂಸ್ಥೆಯಲ್ಲಿ ಭಾರತ ಸಲ್ಲಿಸಿದ್ದ ಪ್ರಸ್ತಾವನೆಗೆ ತಡೆಯೊಡ್ಡಿದ ಚೀನಾ ನಡೆಗೆ ಮೋದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ಮೂಲಕ ಚೀನಾ-ಪಾಕ್ ನಡುವೆ 46 ಶತಕೋಟಿ ಡಾಲರ್ ವೆಚ್ಚದಲ್ಲಿ ಆರ್ಥಿಕ ಕಾರಿಡಾರ್ ನಿರ್ವಿುಸುತ್ತಿರುವ ಚೀನಾ ಕ್ರಮಕ್ಕೂ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರೂ ನಾಯಕರು, ಗಡಿ ವಿಚಾರವನ್ನೂ ಸಹ ಚರ್ಚಿಸಿದರು.

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಬೇಟಿಗೆ ಹರ್ಷ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಈ ಸಮಗ್ರ ಮಾತುಕತೆಯಲ್ಲಿ ಬಹಳಷ್ಟು ವಿಷಯಗಳು ಚರ್ಚೆಗೆ ಬಂದವು ಎಂದು ಟ್ವೀಟ್ ಮಾಡಿದ್ದಾರೆ.

ಈ ಇಬ್ಬರೂ ನಾಯಕರು, ಗುರುವಾರ ಉಫಾದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆ ಮತ್ತು ಶುಕ್ರವಾರ ನಡೆಯುವ ಶಾಂಘೈ ಸಹಕಾರಿ ಸಂಘಟನೆಯ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಶುಕ್ರವಾರ ನಡೆಯುವ ಶಾಂಘೈ ಸಹಕಾರಿ ಸಂಘಟನೆಯ ಶೃಂಗಸಭೆಯ ಜೊತೆ ಪ್ರಧಾನಿ ಮೋದಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಬೇಟಿ ಮಾಡುವ ನಿರೀಕ್ಷೆ ಇದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited