Untitled Document
Sign Up | Login    
Dynamic website and Portals
  
July 9, 2015

ಅಂಬರೀಶ್ ರಾಜೀನಾಮೆ ನಿರ್ಧಾರ: ಮುಖ್ಯಮಂತ್ರಿ, ಸಚಿವರಿಂದ ಮನವೊಲಿಕೆ ಯತ್ನ

ಸಿದ್ಧರಾಮಯ್ಯ ವಿರುದ್ಧ ಬಂಡಾಯದ ಪತಾಕೆ ಹಾರಿಸಿದ ಸಚಿವ ಅಂಬರೀಶ್

ವಸತಿ ಸಚಿವ ಅಂಬರೀಶ್ - ಮುಖ್ಯಮಂತ್ರಿ ಸಿದ್ದರಾಮಯ್ಯ (ಫೈಲ್ ಚಿತ್ರ) ವಸತಿ ಸಚಿವ ಅಂಬರೀಶ್ - ಮುಖ್ಯಮಂತ್ರಿ ಸಿದ್ದರಾಮಯ್ಯ (ಫೈಲ್ ಚಿತ್ರ)

ಬೆಂಗಳೂರು : ಪ್ರಮುಖ ವಿಚಾರಗಳಲ್ಲಿ ತಮ್ಮನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸುತ್ತಿದ್ದಾರೆ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ, ಆದ್ದರಿಂದ ತಾವು ರಾಜೀನಾಮೆ ಕೊಡುವುದಾಗಿ ವಸತಿ ಸಚಿವ ಅಂಬರೀಶ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರು. ತಮ್ಮ ಅಸಮಾಧಾನದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ.

ಈ ಕುರಿತು ಅಂಬರೀಶ್ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಲು ಕಾಂಗ್ರೆಸ್ ಪಕ್ಷ ಮುಂದಾಗಿದೆ. ಈ ಕಾರಣದಿಂದ ರಾಜೀನಾಮೆ, ಸ್ವಾಮೀಜಿ ಭೇಟಿ ಯಾವುದೂ ಇಲ್ಲ ಎಂದು ಗುರುವಾರ ಅಂಬರೀಶ್ ಸ್ಪಷ್ಟಪಡಿಸಿದ್ದಾರೆ.

ಮಂಡ್ಯ ಜಿಲ್ಲೆಯ ಡಿಸಿಸಿ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ನೇಮಕ ಸೇರಿದಂತೆ ಹಲವಾರು ವಿಷಯಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ವಸತಿ ಸಚಿವ ಅಂಬರೀಶ್ ಅಸಮಾಧಾನಗೊಂಡಿದ್ದರು.

ಬುಧವಾರ ಬೆಳಗಾವಿಯಿಂದ ಆಗಮಿಸಿದ ಅಂಬರೀಶ್, ನಿರ್ಮಲಾನಂದ ಸ್ವಾಮೀಜಿಯನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಕುರಿತು ಚರ್ಚಿಸುವುದಾಗಿ ಆಪ್ತರ ಬಳಿ ಹೇಳಿಕೊಂಡಿದ್ದರು.

ಈ ವಿಷಯವಾಗಿ ಮಾತನಾಡಿದ ಸಚಿವ ಮಹದೇವ ಪ್ರಸಾದ್, ಅಂಬರೀಶ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದು ನಿಜ, ಮಂಡ್ಯ ಡಿಸಿಸಿ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ನೇಮಕ ವ್ಯವಹಾರಗಳಿಗೆ ಸಂಬಂಧಿಸಿದಂತೆ ಅಂಬರೀಶ್ ಅವರಿಗೆ ಅಸಮಾಧಾನವಾಗಿರುವುದು ಸತ್ಯ. ಆದರೆ, ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಸೋಮವಾರ ಅಂಬರೀಶ್ ಅವರ ಜೊತೆ ಖುದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆಸುತ್ತಾರೆ. ನಾನು ಕೂಡ ಪೋನಿನಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited