Untitled Document
Sign Up | Login    
Dynamic website and Portals
  
July 10, 2015

ಮೋದಿ - ಷರೀಫ್ ದ್ವಿಪಕ್ಷೀಯ ಮಾತುಕತೆ : 60 ನಿಮಿಷಗಳ ಕಾಲ ನಡೆದ ಮಾತುಕತೆ

ಪಾಕಿಸ್ತಾನದಲ್ಲಿ ನಡೆಯುವ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸುವಂತೆ ಪ್ರದಾನಿ ಮೋದಿಗೆ ಆಹ್ವಾನ

ಮೋದಿ - ಷರೀಫ್ ದ್ವಿಪಕ್ಷೀಯ ಮಾತುಕತೆ (ಚಿತ್ರ ಕೃಪೆ:www.pmindia.gov.in) ಮೋದಿ - ಷರೀಫ್ ದ್ವಿಪಕ್ಷೀಯ ಮಾತುಕತೆ (ಚಿತ್ರ ಕೃಪೆ:www.pmindia.gov.in)

ಉಫಾ : ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಶುಕ್ರವಾರ ಉಫಾದಲ್ಲಿ ಭೇಟಿಯಾಗಿದ್ದು ಸುಮಾರು 60 ನಿಮಿಷಗಳ ಕಾಲ ಮಾತುಕತೆ ನಡೆಸಿದರು.

ಇದೊಂದು ತುಂಬಾ ಫಲಪ್ರದವಾದ ಮಾತುಕತೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಎರಡೂ ದೇಶಗಳು ಪರಸ್ಪರ ಮಾತುಕತೆ ನಡೆಸಿ, ದೇಶಗಳ ಮಧ್ಯೆ ಇರುವ ಸಮಸ್ಯೆಗಳನ್ನು ಬಗೆಹರಿಸಲು ನಿರ್ಧರಿಸಲಾಯಿತು. ಮುಂದಿನ 15 ದಿನಗಳಲ್ಲಿ, ಎರಡೂ ದೇಶದವರು ಬಂಧಿತ ಮೀನುಗಾರರನ್ನು ಬಿಡುಗಡೆಗೊಳಿಸಬೇಕೆಂದು ತೀರ್ಮಾನಿಸಲಾಯಿತು ಎಂದು ಭೇಟಿಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ತಿಳಿಸಿದರು. ಇದರೊಂದಿಗೆ ಮುಂಬೈ ದಾಳಿಯ ತನಿಖೆಯನ್ನು ಚುರುಕುಗೊಳಿಸಲು ಎರಡೂ ದೇಶಗಳು ಒಪ್ಪಿಗೆ ಸೂಚಿಸಿದವು.

ಈ ಸಂದರ್ಭದಲ್ಲಿ, 2016 ರಲ್ಲಿ ಪಾಕಿಸ್ತಾನದಲ್ಲಿ ನಡೆಯುವ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸುವಂತೆ ನವಾಜ್ ಷರೀಫ್ ಅವರ ಆಹ್ವಾನಕ್ಕೆ ಪ್ರಧಾನಿ ಮೋದಿಗೆ ಒಪ್ಪಿಗೆ ಸೂಚಿಸಿದರು ಎನ್ನಲಾಗಿದೆ.

ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಭೇಟಿಯಾಗಿದ್ದರು. ಸುಮಾರು 8 ತಿಂಗಳ ನಂತರ ಪ್ರಧಾನಿ ಮೋದಿ ಮತ್ತು ನವಾಜ್ ಷರೀಫ್ ಅವರ ಭೇಟಿ ಇದಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited