ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಮುಂದುವರೆದಿದ್ದು, ಈ ಸಂಬಂಧ ರಾಜ್ಯಪಾಲ ವಜುಭಾಯಿ ವಾಲಾ ಅವರು ಗುರುವಾರ ಸರ್ಕಾರದ ಬಳಿ ವಿವರಣೆ ಕೇಳಿದ್ದಾರೆ.
ರಾಜ್ಯದಲ್ಲಿ ಸಾಲಬಾಧೆಯಿಂದ ಇದುವರೆಗೆ ಎಷ್ಟು ಜನ ಕಬ್ಬು ಬೆಳೆಗಾರರು, ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ? ಇದನ್ನು ತಡೆಯಲು ಸರ್ಕಾರ ಏನು ಕ್ರಮ ಕೈಗೊಂಡಿದೆ? ರೈತರ ಆತ್ಮಹತ್ಯೆಗೆ ಮೀಟರ್ ಬಡ್ಡಿ ಕಾರಣ ಎಂದು ಆರೋಪಿಸಲಾಗಿದೆ. ಇದನ್ನು ನಿಷೇಧಿಸಲು ಸರ್ಕಾರ ಏನು ಕ್ರಮ ಕೈಗೊಂಡಿದೆ ? ರೈತರ ಸಮಸ್ಯೆಗಳಿಗೆ ಸ್ಪಂದಿಸಿದ್ದೀರಾ ಎಂದು ಸರ್ಕಾರದ ಬಳಿ ರಾಜ್ಯಪಾಲರು ವಿವರ ಕೇಳಿದ್ದಾರೆ.
ಈ ಎಲ್ಲಾ ವಿಚಾರವಾಗಿ ಸಂಜೆಯ ವೇಳೆಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 75 ಜನ ರೈತರು ಕಳೆದ 24 ದಿನದಲ್ಲಿ ಸಾಲಭಾದೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ.