Untitled Document
Sign Up | Login    
Dynamic website and Portals
  
July 20, 2015

ಮುಂಗಾರು ಅಧಿವೇಶನಕ್ಕೂ ಮೊದಲು ಮಿತ್ರಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ (ಫೈಲ್ ಚಿತ್ರ) ಪ್ರಧಾನ ಮಂತ್ರಿ ನರೇಂದ್ರ ಮೋದಿ (ಫೈಲ್ ಚಿತ್ರ)

ನವದೆಹಲಿ : ಮಂಗಳವಾರದಿಂದ ಪ್ರಾರಂಭವಾಗುವ ಮುಂಗಾರು ಅಧಿವೇಶನದಲ್ಲಿ ವ್ಯಾಪಂ ಮತ್ತು ಲಲಿತ್ ಮೋದಿ ಪ್ರಕರಣ ಕುರಿತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಸಾಧ್ಯತೆ ಇರುವುದರಿಂದ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಎನ್ ಡಿ ಎ ಮಿತ್ರ ಪಕ್ಷಗಳ ಸಭೆ ಕರೆದಿದ್ದಾರೆ. ಪ್ರತಿಪಕ್ಷಗಳನ್ನು ಎದುರಿಸಲು ಸರಿಯಾದ ತಂತ್ರ ಹೆಣೆಯಲು ಈ ಸಭೆ ಕರೆಯಲಾಗಿದೆ.

ಕಳೆದ ವರ್ಷ ಮೇ ನಲ್ಲಿ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಮಿತ್ರ ಪಕ್ಷಗಳ ಸಭೆ ಕರೆದಿದ್ದಾರೆ.

ಅಧಿವೇಶನದಲ್ಲಿ ವಿರೋಧ ಪಕ್ಷಗಳು, ವ್ಯಾಪಂ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಲಲಿತ್ ಮೋದಿ ಪ್ರಕರಣದಲ್ಲಿ ಸಿಲುಕಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿಷಯದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ನಿರೀಕ್ಷೆ ಇದೆ.

ಪ್ರತಿಪಕ್ಷಗಳ ವಾಗ್ದಾಳಿಯನ್ನು ಎದುರಿಸಲು ಬಿಜೆಪಿ ತೀವ್ರ ಸಿದ್ದತೆ ನಡೆಸಿದೆ. ಭಾನುವಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಿರಿಯ ನಾಯಕರಾದ ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ರವಿಶಂಕರ್ ಪ್ರಸಾದ್, ಪಿಯೂಷ್ ಗೋಯಲ್, ಸೃತಿ ಇರಾನಿ ಮತ್ತು ನಿರ್ಮಲಾ ಸೀತಾರಾಮನ್ ಜೊತೆ ಸಭೆ ನೆಡೆಸಿದ್ದರು. ಈ ಸಭೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಸಹ ಭಾಗವಹಿಸಿದ್ದರು.

ತಡರಾತ್ರಿ ದೆಹಲಿ ತಲುಪಿದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜೊತೆ ಸಹ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನಲ್ಲಿ ಬಿಸಿ ಏರುವ ಚರ್ಚೆಯನ್ನು ಗ್ರಹಿಸಿದ ಪ್ರಧಾನಿ ಮೋದಿ ಶುಕ್ರವಾರ, ಅಧಿವೇಶನದಲ್ಲಿ ಸ್ಪರ್ಧೆ (ಮುಖಾಬಲ )ಏರ್ಪಡಲಿದೆ ಎಂದು ಹೇಳಿದ್ದಾರೆ.

ಮಿತ್ರಪಕ್ಷಗಳ ಸಭೆಯ ಮೊದಲು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯನಾಯ್ಡು ಮತ್ತು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಕರೆದಿರುವ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ನಿರೀಕ್ಷೆ ಇದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited