Untitled Document
Sign Up | Login    
Dynamic website and Portals
  
July 22, 2015

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಅಂಕಿತ ಹಾಕಬೇಡಿಃ ರಾಜ್ಯಪಾಲರಿಗೆ ಪ್ರತಿಪಕ್ಷಗಳ ಮನವಿ

ರಾಜಭವನಕ್ಕೆ ತೆರಳಿದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿದ ಬಿಜೆಪಿ ನಿಯೋಗ

ಬೆಂಗಳೂರು : ಬುಧವಾರ ಬೆಳಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗ, ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಹಿ ಹಾಕಬೇಡಿ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ.

ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ, ಬಿಬಿಎಂಪಿ ವಿಭಜನೆ ವಿಧೇಯಕವನ್ನು ಸಮ್ಮತಿಸಬೇಡಿ ಎಂದು ಮನವಿ ಸಲ್ಲಿಸಿದೆ.

ರಾಜ್ಯಪಾಲರನ್ನು ಭೇಟಿಯಾದ ನಂತರ ಮಾತನಾಡಿದ ಜಗದೀಶ್ ಶೆಟ್ಟರ್, ಬಿಬಿಎಂಪಿ ವಿಭಜನೆ ವಿಧೇಯಕ ಜನವಿರೋಧಿ, ಸಂವಿಧಾನ ವಿರೋಧಿಯಾಗಿದ್ದು, ಬಿಬಿಎಂಪಿ ಚುನಾವಣೆ ಮುಂದೂಡುವ ದುರುದ್ದೇಶದಿಂದ ರಾಜ್ಯ ಸರ್ಕಾರ ಈ ಮಸೂದೆಯನ್ನು ಅಂಗೀಕರಿಸಿದೆ. ಹಾಗಾಗಿ ಈ ವಿಧೇಯಕ ತಿರಸ್ಕರಿಸಿ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿದ್ದೇವೆ. ಇದರ ಬಗ್ಗೆ ಪರಿಶೀಲನೆ ಮಾಡುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆಂದು ಎಂದು ಹೇಳಿದರು. ಬಿಜೆಪಿ ನಿಯೋಗದಲ್ಲಿ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಸೇರಿದಂತೆ ಹಲವು ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ರಾಜ್ಯಪಾಲರನ್ನು ಭೇಟಿಯಾಗಿ, ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಅಂಕಿತ ಹಾಕದಂತೆ ಮನವಿ ಪತ್ರ ಸಲ್ಲಿಸಿದರು.

ಬಿಜೆಪಿ, ಜೆಡಿಎಸ್ ಸದಸ್ಯರ ವಿರೋಧದ ನಡುವೆಯೇ ಬಿಬಿಎಂಪಿ ವಿಧೇಯಕ ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited