Untitled Document
Sign Up | Login    
Dynamic website and Portals
  
July 25, 2015

ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಅಕ್ಟೋಬರ್ / ನವೆಂಬರ್ ನಲ್ಲಿ ಬಹು ಹಂತದ ಚುನಾವಣೆ ಸಾಧ್ಯತೆ । ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ (ಫೈಲ್ ಚಿತ್ರ) ಪ್ರಧಾನಿ ನರೇಂದ್ರ ಮೋದಿ (ಫೈಲ್ ಚಿತ್ರ)

ಪಟ್ನಾ : ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷ ಬಲವರ್ಧನೆ ಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಪಟ್ನಾ ತಲುಪಿದ್ದಾರೆ. ಪ್ರಧಾನಿ ಮೋದಿ ಅವರು ಶನಿವಾರದಿಂದ ಬಿಹಾರದಲ್ಲಿ ಪ್ರಚಾರ ಪ್ರಾರಂಭಿಸಲಿದ್ದಾರೆ.

ಅಕ್ಟೋಬರ್ ಯಾ ನವೆಂಬರ್ ತಿಂಗಳಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು ಶನಿವಾರ ಮಧ್ಯಾಹ್ನ ಮುಜ್ಹಾಫರ್ ಪುರದಲ್ಲಿ ತಮ್ಮ ಮೊದಲ ಪ್ರಚಾರ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಬಿಹಾರ್ ಗೆ ವಿಶೇಷ ಆರ್ಥಿಕ ಅನುದಾನ ಘೋಷಣೆ ಮಾಡುವ ನಿರೀಕ್ಷೆ ಇದೆ. ಕಳೆದ ವರ್ಷ ಲೋಕಾಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರ್ ಗೆ ವಿಶೇಷ ಅನುದಾನ ನೀಡುವುದಾಗೆ ಭರವಸೆ ನೀಡಿದ್ದರು.

ಬಿಹಾರ್ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿ(ಯು), ಲಲ್ಲೂ ಪ್ರಸಾದ ಯಾದವ್ ಅವರ ಅರ್ ಜೆ ಡಿ ಮತ್ತು ಕಾಂಗ್ರೆಸ್ ಕೈ ಜೋಡಿಸಿರುವುದರಿಂದ ಬಿಜೆಪಿಗೆ ಇದು ಪ್ರತಿಷ್ಠೆಯ ಚುನಾವಣೆಯಾಗಲಿದೆ. ಬಿಜೆಪಿ ವಿರೋಧಿ ಪಕ್ಷಗಳು ನಿತೀಶ್ ಕುಮಾರ್ ಅವರನ್ನು ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಆದರೆ ಬಿಜೆಪಿ ಈ ವರೆಗೆ ಯಾರನ್ನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದೆ.

ಚುನಾವಣಾ ಪ್ರಚಾರ ಭಾಷಣಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಪಟ್ನಾದಲ್ಲಿ ಐಐಟಿ, ಅನಿಲ ಪೈಪ್ಲೈನ್ ಯೋಜನೆ, ಗ್ರಾಮೀಣ ವಿದ್ಯುದೀಕರಣ ಯೋಜನೆ ಮೊದಲಾದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಸರ್ಕಾರದ ಅಧಿಕೃತ ಕಾರ್ಯಕ್ರಮಗಳಿಗೆ ತಮಗೆ ಆಹ್ವಾನವಿದೆ. ಆದ್ದರಿಂದ ಎಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ ಎಂದು ಬಿಹಾರ್ ನ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಿತೀಶ್ ಕುಮಾರ್ ಆಗಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೊಂದಿಗೆ ಪ್ರಚಾರ ನಡೆಸಲು ನಿರಾಕರಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited