Untitled Document
Sign Up | Login    
Dynamic website and Portals
  
July 27, 2015

ಬೆಂಗಳೂರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆಗಮನ : ಎರಡು ದಿನ ನಿಷೇಧಾಜ್ಞೆ

 ರಾಷ್ಟ್ರಪತಿ ಪ್ರಣಬ್ ಮುಖರ್ಜಿ (ಫೈಲ್ ಚಿತ್ರ) ರಾಷ್ಟ್ರಪತಿ ಪ್ರಣಬ್ ಮುಖರ್ಜಿ (ಫೈಲ್ ಚಿತ್ರ)

BW News Bureau : ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ 2 ದಿನಗಳ ಬೆಂಗಳೂರು ಪ್ರವಾಸದ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಎಂ ಎನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಸೋಮವಾರ ಬೆಳಗ್ಗೆ 6 ರಿಂದ ಮಂಗಳವಾರ ರಾತ್ರಿ 12 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ವಿಶೇಷ ವಿಮಾನದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೋಮವಾರ ಯಲಹಂಕ ವಾಯುನೆಲೆಗೆ ಆಗಮಿಸಲಿದ್ದಾರೆ. ಆನಂತರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆಯವ ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಮಹಾಮಂಡಳದ (ಎಫ್​ಕೆಸಿಸಿಐ) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಮಂಗಳವಾರ ಬೆಳಗ್ಗೆ ಯಲಹಂಕದಿಂದ ಬೀದರ್ ಗೆ ತೆರಳಿ, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ. ನಂತರ ನಿಮ್ಹಾನ್ಸ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೆಹಲಿಗೆ ಹಿಂದಿರುಗಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited