ಮುಂಬೈ : ಮುಂಬಯಿ ನ್ಯಾಯಾಲಯ ಬುಧವಾರ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ. ಲಲಿತ್ ಮೋದಿ ಅವರ ಹಣಕಾಸು ಅವ್ಯವಾಹಾರಗಳ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.
ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ, ಲಲಿತ್ ಮೋದಿ ಅವರಿಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಲು ಮನವಿ ಸಲ್ಲಿಸಿತ್ತು. ಇದಕ್ಕೂ ಮೊದಲು ಜಾರಿ ಮಾಡಿದ್ದ ಸಮನ್ಸ್ ಗೆ ಲಲಿತ್ ಮೋದಿ ಹಾಜರಾಗದ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ಜು. 27 ರಂದು ನ್ಯಾಯಾಲಯಕ್ಕೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲು ಮನವಿ ಸಲ್ಲಿಸಿತ್ತು.
ಈ ಮೊದಲು ಮೂರು ಬಾರಿ ಸಮನ್ಸ್ ಜಾರಿ ಮಾಡಿದರೂ ಸಹ ಲಲಿತ್ ಮೋದಿ ತನಿಖೆಗೆ ಸಹಕರಿಸದ ಕಾರಣ, ಅವರಿಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸುವುದು ಸೂಕ್ತವಾಗಿದೆ ಎಂದು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪಿ ಆರ್ ಭಾವಕೆ ಹೇಳಿದ್ದಾರೆ.