Untitled Document
Sign Up | Login    
Dynamic website and Portals
  
August 6, 2015

ರೈತರ ಸರಣಿ ಆತ್ಮಹತ್ಯೆ: ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲು ರಾಜ್ಯ ಬಿಜೆಪಿ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 20 ಸಮಾವೇಶಗಳನ್ನು ನಡೆಸಿ ರೈತರ ಆತ್ಮಹತ್ಯೆ ತಡೆಯಲು ಜಾಗೃತಿ ಮೂಡಿಸಲು ಹಾಗೂ ರೈತರ ಸಾವು ತಡೆಯುವಲ್ಲಿ ಸರ್ಕಾರ ಹೇಗೆ ವಿಫಲವಾಗಿದೆ ಎಂಬುದನ್ನು ಎತ್ತಿ ತೋರಿಸಲೂ ಬಿಜೆಪಿ ನಿರ್ಧರಿಸಿದೆ. ಸಂಸತ್ ಅಧಿವೇಶನದ ನಂತರ ಈ ಸಮಾವೇಶನಗಳನ್ನು ನಡೆಸಲು ಉದ್ದೇಶಿಸಲಾಗಿದೆ.

ಬುಧವಾರ ದೆಹಲಿಯಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊೞಲಾಗಿದೆ. ಈ ವರ್ಷ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ಬಾರದೆ ಇರುವುದರಿಂದ ರಾಜ್ಯ ಎದುರಿಸುತ್ತಿರುವ ಬರಗಾಲದ ಪರಿಸ್ಥಿತಿಯಿಂದ ಉಂಟಾಗಿರುವ ರೈತರ ಸಂಕಷ್ಠಗಳನ್ನು ನಿಭಾಯಿಸುವಲ್ಲಿ ಸರಕಾರದ ವೈಫಲ್ಯದ ಬಗ್ಗೆಯೂ ಬಿಜೆಪಿ ಹೋರಾಟ ನಡೆಸಲಿದೆ ಎಂದು ತಿಳಿದುಬಂದಿದೆ.

ರೈತರ ಆತ್ಮಹತ್ಯೆ ಹಾಗೂ ಬರದ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಸರ್ಕಾರ ವಿಫಲವಾಗಿದೆ. ಹಾಗಾಗಿ ಸರಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಿಕೊಡುವುದು ವಿಪಕ್ಷವಾಗಿ ನಮ್ಮ ಕರ್ತವ್ಯವಾಗಿದೆ. ಆದ್ದರಿಂದ ಈ ನಿರ್ಧಾರಕ್ಕೆ ಬರಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited