Sullia : ಎಲಿಮಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಳ್ಯದ ಸ್ನೇಹ ಪ್ರೌಢಶಾಲೆಯ ಎಂಟನೆಯ ತರಗತಿ ವಿದ್ಯಾರ್ಥಿ ಶರಣ್ ಪ್ರಕಾಶ್ ಆರ್ 40-45 ಕೆ ಜಿ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಇದೇ 20-08-2015 ರಂದು ಗುತ್ತಿಗಾರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾನೆ.
ಚೊಕ್ಕಾಡಿಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷದೊಳಗಿನ ವಯೋಮಿತಿಯ ವಿಭಾಗದಲ್ಲಿ ಸುಳ್ಯದ ಸ್ನೇಹ ಪ್ರೌಢಶಾಲೆಯ ಎಂಟನೆಯ ತರಗತಿ ವಿದ್ಯಾರ್ಥಿನಿ ಕೌಶಿಕಾ ಜಿ ದ್ವಿತೀಯ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು 12-09-2015 ರಂದು ಮಂಗಳೂರಿನಲ್ಲಿ ಜರುಗುವ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾಳೆ.