ನವದೆಹಲಿ : ಸುಪ್ರೀಂ ಕೋರ್ಟ್ ಸ್ಪೋಟಿಸುವುದಾಗಿ ಅನಾಮಧೇಯ ಇ-ಮೇಲೆ ಬಂದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇ-ಮೇಲ್ ಅನ್ನು ಪರೀಕ್ಷಿಸಿ, ಕಳುಹಿಸಿದವರ ಮೂಲವನ್ನು ಇನ್ನೂ ಕಂಡು ಹಿಡಿಯಬೇಕಾಗಿದೆ. ಕಾನೂನು ವಿದ್ಯಾರ್ಥಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಸುಪ್ರೀಂ ಕೋರ್ಟ್ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ.
ವಕೀಲರ ಜೊತೆ ಸಮಾಲೋಚನೆ ನಡೆಸಲು ಬರುವ ಕಕ್ಷೀದಾರರಿಗೂ ಪ್ರವೇಶ ನಿಷೇಧಿಸಲಾಗಿದೆ.
ಈ ಮೊದಲು ಈ ಹಿಂದೆ 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮೂನ್ ಸಲ್ಲಿಸಿದ್ದ ಅರ್ಜಿಯನ್ನು ಕೊನೆಯ ಕ್ಷಣದಲ್ಲಿ ತಿರಸ್ಕರಿಸಿದ ಸುಪ್ರೀಂಕೋರ್ಟ್ನ ಮೂವರು ನ್ಯಾಯಮೂರ್ತಿಗಳ ಪೈಕಿ ಒಬ್ಬರಾಗಿರುವ ನ್ಯಾ.ದೀಪಕ್ ಮಿಶ್ರಾ ಅವರಿಗೆ ಜೀವ ಬೆದರಿಕೆ ಪತ್ರವೊಂದು ಬಂದಿತ್ತು. ಯಾಕೂಬ್ ಮೆಮನ್ ಸಲ್ಲಿಸಿದ್ದ ಅರ್ಜಿಯನ್ನು ಕೊನೆಯ ಕ್ಷಣದಲ್ಲಿ ತಿರಸ್ಕರಿಸಿದ ಸುಪ್ರೀಂಕೋರ್ಟ್ನ ಮೂವರು ನ್ಯಾಯಮೂರ್ತಿಗಳ ಭದ್ರತೆಯನ್ನೂ ಹೆಚ್ಚಿಸಲಾಗಿದೆ.