BW News Bureau : ಮಂಗಳವಾರ ಆ. 25 ರಂದು, ಮತ ಎಣಿಕೆ ದಿನ ಯಾವುದೇ ರೀತಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಿದ್ದಾರೆ.
ಮಣಿ ಎಣಿಕೆ ನಡೆಯುವ ಬೆಂಗಳೂರಿನ 27 ಕೇಂದ್ರಗಳಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರು ಸೇರಿದಂತೆ 10 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಗೆದ್ದ ಅಭ್ಯರ್ಥಿಗಳು ಶಾಂತಿಯುತ ವಿಜಯೋತ್ಸವ ಆಚರಣೆಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ ಎಣಿಕೆ ಕೇಂದ್ರಗಳಲ್ಲಿ 66 ಕೆಎಸ್ಆರ್ಪಿ, ನಗರ ಸಶಸ್ತ್ರ ಮೀಸಲು ಪಡೆ ತುಕಡಿಗಳನ್ನು ನಿಯುಕ್ತಿಗೊಳಿಸಲಾಗಿದ್ದು, ನಗರದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂದು ಬಂದೋಬಸ್ತ್ ನಲ್ಲಿರುತ್ತಾರೆ ಎಂದು ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಹೇಳಿದ್ದಾರೆ.
ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ಪರಾಜಿತ ಹಾಗೂ ಗೆದ್ದ ಅಭ್ಯರ್ಥಿಗಳು ಬೆಂಬಲಿಗರು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಆ. 22, ಶನಿವಾರದಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮತದಾನವಾಗಿತ್ತು.