Untitled Document
Sign Up | Login    
Dynamic website and Portals
  
August 25, 2015

ಬಿಬಿಎಂಪಿ ಚುನಾವಣೆಃ ಮತ್ತೆ ಅರಳಿದ ಕಮಲ, 'ಕೈ' ಸುಟ್ಟುಕೊಂಡ ಕಾಂಗ್ರೆಸ್

ಥ್ಯಾಂಕ್ಯೂ ಬೆಂಗಳೂರು ! - ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಬಿಜೆಪಿ ಕಚೇರಿಯಲ್ಲಿ ಗೆಲುವಿನ ಸಂಭ್ರಮಾಚರಣೆ ಬಿಜೆಪಿ ಕಚೇರಿಯಲ್ಲಿ ಗೆಲುವಿನ ಸಂಭ್ರಮಾಚರಣೆ

BW News Bureau : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅತೀ ದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಪುನಃ ಬಿಜೆಪಿ ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.

ಒಟ್ಟು 198 ವಾರ್ಡ್ ಗಳ ಪೈಕಿ 1 ವಾರ್ಡ್ ನಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿತ್ತು. ಉಳಿದ 197 ವಾರ್ಡ್ ಗಳಿಗೆ ಶನಿವಾರ ನಡೆದ ಚುನಾವಣೆಯ ಮತ ಎಣಿಕೆ ಮಂಗಳವಾರ ಮಧ್ಯಾಹ್ನ ಪೂರ್ಣಗೊಂಡಿದ್ದು, ಅಂತಿಮವಾಗಿ ಬಿಜೆಪಿ - 101 (1+100), ಕಾಂಗ್ರೆಸ್ - 75, ಜೆಡಿಎಸ್ - 14 ಮತ್ತು ಪಕ್ಷೇತರರು - 08 ಸ್ಥಾನಗಳಿಸಿದ್ದಾರೆ.

ಬಿಜೆಪಿ ಒಟ್ಟು 101 ಸ್ಥಾನ ಗಳಿಸುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಕ್ಷದ ಗೆಲುವಿನ ಸಂಭ್ರಮಾಚರಣೆಯನ್ನು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಅದ್ದೂರಿಯಾಗಿ ಆಚರಿಸಲು ಕಾರ್ಯಕರ್ತರು ತೀರ್ಮಾನಿಸಿದ್ದಾರೆ.

ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪ್ರದರ್ಶನದ ಬಗ್ಗೆ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿ ಚುನಾವಣೆಯ ಫಲಿತಾಂಶದ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಥ್ಯಾಂಕ್ಯೂ ಬೆಂಗಳೂರು! ಜನರಿಗೆ ನನ್ನ ಕೃತಜ್ಞತೆಗಳು. ಕರ್ನಾಟಕ ರಾಜ್ಯ ಬಿಜೆಪಿ ಮುಖಂಡರಿಗೆ ಮತ್ತು ಬಿಬಿಎಂಪಿ ಚುನಾವಣೆಯಲ್ಲಿ ಕೆಲಸ ಮಾಡಿದ ಎಲ್ಲಾ ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಹೇಳಿದ್ದಾರೆ.

ಇತ್ತೀಚೆಗೆ ಮಧ್ಯಪ್ರದೇಶ ಮತ್ತು ರಾಜಸ್ಥಾನದ ಸ್ಠಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿಜಯ ಸಾಧಿಸಿದ ನಂತರ, ಬಿಬಿಎಂಪಿ ಫಲಿತಾಂಶದಿಂದ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಇದು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ರಾಜಕೀಯ ಗೆಲುವು. ಜನರು ಬಿಜೆಪಿಯನ್ನು ನಂಬಿದ್ದಾರೆ. 125 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ನಾವು ಬದ್ದರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಬಿಬಿಎಂಪಿ ಚುನಾವಣಾ ಫಲಿತಾಂಶ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಾದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬಿಬಿಎಂಪಿ ಚುನಾವಣೆಯ ಸೋಲಿನ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಸಚಿವರ ಸಭೆ ಕರೆದಿದ್ದಾರೆ.

ಬಿಬಿಎಂಪಿ ಚುನಾವಣೆಯಲ್ಲಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬುಧವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : BBMP

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ನಗರದ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.
  • ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ನೇಮಕ
  • ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited