Untitled Document
Sign Up | Login    
Dynamic website and Portals
  
September 21, 2015

ಐರ್ಲೆಂಡ್ ಮತ್ತು ಯುಎಸ್ಎಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ಸುಮಾರು 60 ವರ್ಷಗಳ ಬಳಿಕ ಐರ್ಲೆಂಡ್ ಗೆ ಭಾರತದ ಪ್ರಧಾನಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) ಪ್ರಧಾನ ಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸೆ. 23ರಿಂದ 29 ರವರೆಗೆ ಐರ್ಲೆಂಡ್ ಮತ್ತು ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ.

'ನಾನು ಸೆ. 23 ರಂದು ಐರ್ಲೆಂಡ್ ಗೆ ಭೇಟಿ ನೀಡಲಿದ್ದೇನೆ. ಅಲ್ಲಿಯ ಪ್ರಧಾನಿ ಜೊತೆ ಮಾತುಕತೆ ನಡೆಸಲಿದ್ದೇನೆ. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ಮಧ್ಯೆ ಆರ್ಥಿಕ ಸಂಬಂಧಗಳನ್ನು ಇನ್ನಷ್ಟು ಉತ್ತಮಗೊಳಿಸಲು ಬಯಸುತ್ತೇವೆ. ಐರ್ಲೆಂಡ್ ನಲ್ಲಿ ಭಾರತೀಯ ಸಮುದಾಯದ ಜೊತೆ ಮಾತುಕತೆ ನಡೆಸಲಿದ್ದೇನೆ' ಎಂದು ಪ್ರಧಾನಿ ಮೋದಿ ಫೇಸ್ ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಕಳೆದ 60 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಐರ್ಲೆಂಡ್ ಗೆ ತೆರಳುತ್ತಿರುವುದು ಇದೇ ಮೊದಲು.

ಸೆ. 24ರಂದು ಯುಎಸ್ ಗೆ ತೆರಳಲಿರುವ ಪ್ರಧಾನಿ ಮೋದಿ ಅಲ್ಲಿ ಮುಂದಿನ 6 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ವಿಶ್ವಸಂಸ್ಥೆಯ 70ನೇ ವರ್ಷಾಚರಣೆ ಕಾರ್ಯಕ್ರಮವೂ ಪ್ರಧಾನಿ ನರೇಂದ್ರ ಮೋದಿ ಅವರ ಯುಎಸ್ ಭೇಟಿ ವೇಳೆಯೇ ನಡೆಯಲಿದ್ದು, ಅವರು ವಿಶ್ವಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಫೇಸ್‌ಬುಕ್‌ ಕಚೇರಿ, ಗೂಗಲ್‌ ಕ್ಯಾಂಪಸ್‌ಗೂ ಅವರು ಭೇಟಿ ನೀಡಲಿದ್ದಾರೆ.

ಸೆ. 26-27 ರಂದು ವೆಸ್ಟ್ ಕೋಸ್ಟ್ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅಲ್ಲಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 33 ವರ್ಷಗಳ ನಂತರದ ಭಾರತದ ಪ್ರಧಾನಿಯ ಭೇಟಿ ಇದಾಗಿದೆ.

ಸೆ. 27ರಂದು ಸ್ಯಾನ್‌ಜೋಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited