Untitled Document
Sign Up | Login    
Dynamic website and Portals
  
September 26, 2015

ಕರ್ನಾಟಕ ಬಂದ್ಃ ರಾಜ್ಯಾದ್ಯಂತ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ

ಬೆಂಗಳೂರು : ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಶನಿವಾರದ ಕರ್ನಾಟಕ ಬಂದ್ ಗೆ ಬೆಂಗಳೂರು, ಬಾಗಲಕೋಟೆ, ಹುಬ್ಬಳ್ಳಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಆದರೆ ಮಂಗಳೂರು, ಉಡುಪಿ, ಭಟ್ಕಳ, ರಾಯಚೂರು, ಬೀದರ್ ಕಾರವಾರ ಸೇರಿದಂತೆ ಹಲವೆಡೆ ಬಂದ್ ಬಿಸಿ ತಟ್ಟಿಲ್ಲ.

ಬೆಂಗಳೂರಿನಲ್ಲಿ ಬಹುತೇಕ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಲಾಗಿದೆ. ಮೆಟ್ರೋ, ಆಟೋ, ಟ್ಯಾಕ್ಸಿ ವಿರಳವಾಗಿ ರಸ್ತೆಗಿಳಿದಿದೆ. ಹೋಟೆಲ್ ಗಳೂ ಕೂಡಾ ಕೆಲವೆಡೆ ತೆರೆದಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಇಲ್ಲದೆ ಜನರು ಪರದಾಡುವಂತಾಗಿದೆ.

ಹುಬ್ಬಳ್ಳಿ, ಧಾರವಾಡ, ನವಲಗುಂದ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿಯೂ ಬಂದ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಬಸ್ ಸಂಚಾರ ಇಲ್ಲದೆ ಜನರು ಪರದಾಡುವಂತಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ಬಂದ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿ, ರಾಜ್ಯಾದ್ಯಂತ ನಡೆಯುತ್ತಿರುವ ವಿದ್ಯಮಾನಗಳ ವಿವರ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಹಿರಿಯ ವಕೀಲ ಫಾಲಿ ನಾರಿಮನ್ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited