Untitled Document
Sign Up | Login    
Dynamic website and Portals
  
September 29, 2015

ಶಾಂತಿ ಪಡೆಗಳನ್ನು ಒದಗಿಸುವ ದೇಶಗಳು ನಿರ್ಧಾರ ಕೈಗೊಳ್ಳುವಲ್ಲಿ ಸೂಕ್ತ ಪ್ರಾತಿನಿಧ್ಯ ಹೊಂದಿಲ್ಲ: ಪ್ರಧಾನಿ ಮೋದಿ

ಯುಎಸ್ ಅಧ್ಯಕ್ಷ ಬರಾಕ್ ಒಬಮಾ - ಪ್ರಧಾನಿ ನರೇಂದ್ರ ಮೋದಿ ಭೇಟಿ ಯುಎಸ್ ಅಧ್ಯಕ್ಷ ಬರಾಕ್ ಒಬಮಾ - ಪ್ರಧಾನಿ ನರೇಂದ್ರ ಮೋದಿ ಭೇಟಿ

ನ್ಯೂಯಾರ್ಕ್ : ತಮ್ಮ 5 ದಿನಗಳ ಅಮೆರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ಹಿಂದಿರುಗುವ ಮೊದಲು ಪ್ರಧಾನಿ ಮೋದಿ ವಿಶ್ವ ಶಾಂತಿಪಾಲನಾ ಶೃಂಗಸಭೆಯಲ್ಲಿ ಭಾಗವಹಿಸಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತರಬೇಕಾದ ಸುಧಾರಣೆಗಳ ಬಗ್ಗೆ ಮತ್ತೊಮ್ಮೆ ಒತ್ತಿ ಹೇಳಿದರು.

ಕೊನೆಯ ದಿನದ ಪ್ರಮುಖಾಂಶಗಳುಃ

* ದೊಡ್ಡ ಶಾಂತಿ ಪಡೆಗಳನ್ನು ಒದಗಿಸುವ ದೇಶಗಳು ನಿರ್ಧಾರ ಕೈಗೊಳ್ಳುವಲ್ಲಿ ಸೂಕ್ತ ಪ್ರಾತಿನಿಧ್ಯ ಹೊಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶೃಂಗಸಭೆಯಲ್ಲಿ ಹೇಳಿದರು. ಭಾರತ ಇನ್ನೂ ಹೆಚ್ಚು ಶಾಂತಿ ಪಡೆಗಳನ್ನುನಿಯೋಜಿಸುವುದಾಗಿ ಮತ್ತು ಅವರಿಗೆ ತರಬೇತಿ ಕೊಡುವುದಾಗಿ ಭರವಸೆ ನೀಡಿತು.

* ಶೃಂಗಸಭೆಯಲ್ಲಿ ಭಾಗವಹಿಸುವ ಮೊದಲು ಪ್ರಧಾನಿ ಮೋದಿ ಯುಎಸ್ ಅಧ್ಯಕ್ಷ ಬರಾಕ್ ಒಬಮಾ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಇದು ಒಂದು ವರ್ಷದಲ್ಲಿ 3 ನೇ ಮಾತುಕತೆಯಾಗಿದೆ.

* ದ್ವಿಪಕ್ಷೀಯ ಮಾತುಕತೆಯ ನಂತರ ಮಾತನಾಡಿದ ಪ್ರಧಾನಿ ಮೋದಿ, ಭಾರತ ಮತ್ತು ಯುಎಸ್ ಹವಾಮಾನ ಬದಲಾವಣೆ ಮೇಲಿನ ಬದ್ಧತೆಯನ್ನು ಹಂಚಿಕೊಂಡಿದೆ ಎಂದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ಬೆಂಬಲ ವ್ಯಕ್ತಪಡಿಸಿದ ಯುಎಸ್ ಅಧ್ಯಕ್ಷ ಬರಾಕ್ ಒಬಮಾ ಅವರಿಗೆ ಧನ್ಯವಾದ ತಿಳಿಸಿದರು.

* ದ್ವಿಪಕ್ಷೀಯ ಮಾತುಕತೆಯಲ್ಲಿ ಕಾಶ್ಮೀರದ ವಿಷಯದ ಬಗ್ಗೆ ಪ್ರಸ್ತಾಪವಾಯಿತೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವಕ್ತಾರ ವಿಕಾಸ್ ಸ್ವರೂಪ್, ಕಾಶ್ಮೀರ ಭಾರತ ಮತ್ತು ಪಾಕಿಸ್ತಾನಗಳ ಮಧ್ಯೆ ಇರುವ ಸಮಸ್ಯೆ. ಇದನ್ನು ದ್ವಿಪಕ್ಷೀಯ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬ ಅಭಿಪ್ರಾಯಕ್ಕೆ ಒಬಾಮ ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.

* ತಮ್ಮ ಯುಎಸ್ ಪ್ರವಾಸದ ಕೊನೆಯ ದಿನ, ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್, ಫ್ರೆಂಚ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಮತ್ತು ಪ್ಯಾಲೆಸ್ಟೈನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಅವರ ಜೊತೆ ಮಾತುಕತೆ ನಡೆಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited