Untitled Document
Sign Up | Login    
Dynamic website and Portals
  
October 5, 2015

ಉಗ್ರರ ದಾಳಿಗೆ ನಾಲ್ವರು ಭಾರತೀಯ ಯೋಧರು ಬಲಿ

ಶ್ರೀನಗರ : ಜಮ್ಮು-ಕಾಶ್ಮೀರದ ಕುಪ್ವಾರಾ ದಲ್ಲಿ ಉಗ್ರವಾದಿಗಳು ಮತ್ತು ಗಡಿ ಭದ್ರತಾ ದಳದ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೋಮವಾರ 4 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಓರ್ವ ಉಗ್ರ ಹತನಾಗಿದ್ದಾನೆ.

ಹಂದ್ವಾರಾದಲ್ಲಿನ ಹಾಫ‌ೂರ್ದಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತುಕೊಂಡಿದ್ದಾರೆ ಎಂಬ ಮಾಹಿತಿ ಪಡೆದ ಭಾರತೀಯ ಯೋಧರು ತಕ್ಷಣ ಅಲ್ಲಿಗೆ ಧಾವಿಸಿ ಕಾರ್ಯಾಚರಣೆಗೆ ಮುಂದಾದರು. ಈ ಸಂದರ್ಭದಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಭಾರತೀಯ ಯೋಧರು ಮೃತಪಟ್ಟಿದ್ದಾರೆ.

ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರದಂದು ನಡೆದಿದ್ದ ಎನ್‌ಕೌಂಟ್‌ರ್‌ಗೆ ಇಬ್ಬರು ಜೈಶ್‌ ಎ ಮೊಹಮ್ಮದ್‌ ಉಗ್ರರು ಹತರಾಗಿದ್ದರು. ಅದೇ ಕಾದಾಟದಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದ. ಮೃತಪಟ್ಟ ಉಗ್ರರು ಪಾಕಿಸ್ತಾನದ ನಾಗರಿಕರು ಇನ್ನುವ ಶಂಕೆ ವ್ಯಕ್ತವಾಗಿದೆ.

ಪಾಕಿಸ್ತಾನ ಮೂಲದ ಜೈಶ್‌ ಎ ಮೊಹಮ್ಮದ್‌ ಡಿಸೆಂಬರ್ 13, 2001 ರಲ್ಲಿ ನಡೆದ ಸಂಸತ್ತ್ ದಾಳಿ ಸೇರಿದಂತೆ ಜಮ್ಮು-ಕಾಶ್ಮೀರದಲ್ಲಿ ನಡೆದ ಬಹಳಷ್ಟು ದಾಳಿಯ ರುವಾರಿಯಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
 • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
 • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
 • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
 • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited