Untitled Document
Sign Up | Login    
Dynamic website and Portals
  
October 10, 2015

ರೈತರಿಗೆ ಭಾರೀ ಕೊಡುಗೆ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ (ಫೈಲ್ ಚಿತ್ರ) ಮುಖ್ಯಮಂತ್ರಿ ಸಿದ್ದರಾಮಯ್ಯ (ಫೈಲ್ ಚಿತ್ರ)

ಹಾವೇರಿ : ಹಾವೇರಿಯ ಗುಡಗೂರಿನಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ಭಾರೀ ಕೊಡುಗೆಗಳನ್ನು ನೀಡಿದ್ದಾರೆ. ಬರಗಾಲ ಮತ್ತು ಸಾಲದ ಸುಳಿಯಲ್ಲಿ ಸಿಲುಕಿರುವ ರೈತರಿಗೆ ದೊಡ್ಡ ಪರಿಹಾರ ಘೋಷಣೆ ಮಾಡಿದ್ದಾರೆ.

ಮೃತ ರೈತರ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು 2 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಿದ್ದಾರೆ. ಜೊತೆಗೆ ಮೃತ ರೈತರ ಮಕ್ಕಳ ಸ್ನಾತಕೋತ್ತರ ಪದವಿವರೆಗಿನ ವಿದ್ಯಾಭ್ಯಾಸದ ಖರ್ಜನ್ನು ಸರ್ಕಾರವೇ ಭರಿಸಲಿದೆ. ಮೃತ ರೈತರ ಪತ್ನಿಯ ವಿಧವಾ ಮಾಶಾಸನ 500ರಿಂದ 2 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ. ರೈತರ ಅಲ್ಪ, ಮಧ್ಯಮ, ದೀರ್ಘಾವಧಿ ಸಾಲದ ಮೇಲಿನ ಎಲ್ಲಾ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ತಿಳಿಸಿದರು.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸದ ಎರಡನೇ ದಿನವಾದ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಈ ಕೊಡುಗೆಗಳನ್ನು ಘೋಷಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited