ಬೆಂಗಳೂರು : ಪ್ರತಿ ವರ್ಷ ನವೆಂಬರ್ 10ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬ್ರಿಟೀಷರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂ ಮತ್ತು ತಾಲೂಕು ಕೇಂದ್ರಕ್ಕೆ 25 ಸಾವಿರ ರೂ ಅನುದಾನ ಬಿಡುಗಡೆ ಮಾಡಿದೆ.
2014 ಡಿಸೆಂಬರ್ನಲ್ಲಿ ಇತಿಹಾಸ ತಜ್ಞ ಪ್ರೊ.ಬಿ. ಶೇಖ್ ಅಲಿ ಅವರು ಟಿಪ್ಪು ಸುಲ್ತಾನ್ ಬಗ್ಗೆ ಬರೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ವರ್ಷ ಸರ್ಕಾರದಿಂದಲೇ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲಾಗುವುದು ಎಂದು ತಿಳಿಸಿದ್ದರು.