Untitled Document
Sign Up | Login    
Dynamic website and Portals
  
October 20, 2015

ವೀರೇಂದ್ರ ಸೆಹ್ವಾಗ್ ಕ್ರಿಕೆಟ್​ಗೆ ವಿದಾಯ

ನವದೆಹಲಿ : ಭಾರತ ತಂಡದ ಆರಂಭಿಕ ಬ್ಯಾಟ್ಸ್​ಮನ್ ವೀರೇಂದ್ರ ಸೆಹ್ವಾಗ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸೋಮವಾರ ಸಂಜೆಯೇ ಸೆಹ್ವಾಗ್ ನಿವೃತ್ತಿಯ ಪ್ರಕಟಿಸುವ ವಿಚಾರ ಸುದ್ದಿಯಾಗಿತ್ತು. ಬಳಿಕ ಇವೆಲ್ಲ ಗಾಳಿ ಸುದ್ದಿ, ಅಂತದ್ದೇನಿಲ್ಲ ಎಂದಿದ್ದ ವೀರೇಂದ್ರ ಸೆಹ್ವಾಗ್ ಮಂಗಳವಾರ ತಮ್ಮ ನಿವೃತ್ತಿಯನ್ನು ಪ್ರಕಟಿಸಿದ್ದಾರೆ.

ಸೆಹ್ವಾಗ್ ಅವರು ಎಲ್ಲಾ ಪ್ರಕಾರದ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಇದರಿಂದಾಗಿ ಸೆಹ್ವಾಗ್ ಮುಂದಿನ ಐಪಿಎಲ್ ಟೂರ್ನಿಯಲ್ಲೂ ಆಡುವುದಿಲ್ಲ.

ಮಂಗಳವಾರ ಮಧ್ಯಾಹ್ನ ಸ್ವತಃ ತಾವೇ ಟ್ವಿಟರ್​ನಲ್ಲಿ ಎಲ್ಲಾ ಪ್ರಕಾರದ ಕ್ರಿಕೆಟ್​ನಿಂದ ನಿವೃತ್ತಿಯಾಗುತ್ತಿರುವುದಾಗಿ ಪ್ರಕಟಿಸಿದ್ದಾರೆ. ಅಲ್ಲದೇ ತಮ್ಮ ಮೇಲೆ ಇಷ್ಟು ದಿನ ತೋರಿದ ಪ್ರೀತಿಗೆ ಧನ್ಯವಾದ ಹೇಳಿದ್ದಾರೆ.

ಸೆಹ್ವಾಗ್ ಈತನಕ 104 ಟೆಸ್ಟ್ ಪಂದ್ಯಗಳನ್ನಾಡಿ 8586 ರನ್​ಗಳನ್ನು ಗಳಿಸಿದ್ದು, 251 ಏಕದಿನ ಪಂದ್ಯಗಳನ್ನಾಡಿ 8273 ರನ್ ಸಂಪಾದಿಸಿದ್ದಾರೆ. ಇನ್ನು 19 ಟ್ವೆಂಟಿ20 ಪಂದ್ಯಗಳನ್ನಾಡಿ 394 ರನ್ ಗಳಿಸಿದ್ದಾರೆ.

ನನ್ನ ಜನ್ಮದಿನದಂದೇ ಕ್ರಿಕೆಟ್​ಗೆ ವಿದಾಯ ಹೇಳಬೇಕೆಂದುಕೊಂಡಿದ್ದೆ. ಅದೇ ಪ್ರಕಾರ ಕುಟುಂಬ ಸದಸ್ಯರ ಉಪಸ್ಥಿತಿಯಲ್ಲಿ ಇಂದು ಎಲ್ಲಾ ಪ್ರಕಾರದ ಕ್ರಿಕೆಟ್​ನಿಂದ ನಿವೃತ್ತಿ ಘೊಷಿಸಿದ್ದೇನೆ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Sports

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು
  • ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ.
  • ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ
  • ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited