ಬೆಂಗಳೂರು : ಮಾಜಿ ಸಚಿವ, ಹಾಲಿ ಶಾಸಕ, ಗುರುಪಾದಪ್ಪ ನಾಗಮಾರಪಲ್ಲಿ (75) ಅವರು ಮಂಗಳವಾರ ನಸುಕಿನ ವೇಳೆ ವಿಧಿವಶರಾಗಿದ್ದಾರೆ.
ಸೋಮವಾರ ರಾತ್ರಿ ಹೃದಯಾಘಾತವಾದ ಬಳಿಕ ಗುರುಪಾಮಾದಪ್ಪ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮಂಗಳವಾರ ವಿಮಾನದಲ್ಲಿ ಬೀದರ್ ಗೆ ಪಾರ್ಥೀವ ಶರೀರವನ್ನು ಕೊಂಡೊಯ್ದ ಬಳಿಕ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು. ಬುಧವಾರ ಬೆಳಗ್ಗೆ 11 ಗಂಟೆಗೆ ನಾಗಮಾರಪಲ್ಲಿ ಅವರ ಹುಟ್ಟೂರು ಚಿಂತಾಕಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಜನತಾ ಪರಿವಾರದಿಂದ ರಾಜಕೀಯ ಆರಂಭಿಸಿದ ನಾಗಮಾರಪಲ್ಲಿ ಅವರು ಒಟ್ಟು 6 ಬಾರಿ ವಿಧಾನಸಭೆಗೆ ಆಯ್ಕೆ ಯಾಗಿದ್ದಾರು. ಮೂರು ಬಾರಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ದ್ದ ಅವರು ಕಳೆದ ವಿಧಾನಸಭೆಯಲ್ಲಿ ಯಡಿಯೂರಪ್ಪ ನೇತೃತ್ವದ ಕೆಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು.