Untitled Document
Sign Up | Login    
Dynamic website and Portals
  
November 17, 2015

ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ನಿಧನ

ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ನಿಧನ

ನವದೆಹಲಿ : ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಮಂಗಳವಾರ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂಘಾಲ್ ಅವರನ್ನು ಗುರಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಶೋಕ್ ಸಿಂಘಾಲ್ ಅವರಿಗೆ 89 ವರ್ಷ ವಯಸ್ಸಾಗಿತ್ತು.

ಬಲಗಡೆಯ ಕೆಳಗಿನ ಲೋಬ್ ನ್ಯುಮೋನಿಯಾದ ಚಿಕಿತ್ಸೆ ಪಡೆಯುತ್ತಿದ್ದ ಸಿಂಘಾಲ್ ಅವರನ್ನು ನ. 14 ರ ಸಂಜೆ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇರಿಸಲಾಗಿತ್ತು. ಗೃಹ ಸಚಿವ ರಾಜನಾಥ ಸಿಂಗ್ ಸೇರಿದಂತೆ ಇತರೆ ಬಿಜೆಪಿ ನಾಯಕರು ಗುರಗಾಂವ್ ನ ಮೇದಾಂತ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಸಿಂಘಾಲ್ ಅವರು ಕಳೆದ 20 ವರ್ಷಗಳಿಂದ ವಿಎಚ್‌ಪಿ ಅಂತರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಆಂದೋಲನದ ರೂವಾರಿಯಾಗಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited