ಪಾಟ್ನಾ : ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಶುಕ್ರವಾರ 2 ಗಂಟೆಗೆ ನಿತೀಶ್ ಕುಮಾರ್ 5ನೇ ಬಾರಿಗೆ ಬಿಹಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲಾಲೂ ಪ್ರಸಾದ್ ಯಾದವ್ ಅವರ ಮಗ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ತೇಜಸ್ವಿ ಯಾದವ್ ಅವರನ್ನು ಉಪಮುಖ್ಯಮಂತ್ರಿ ಮಾಡುವ ನಿರೀಕ್ಷೆ ಇದೆ.
ಲಾಲೂ ಪ್ರಸಾದ್ ಯಾದವ್ ಅವರ ಇನ್ನೊಬ್ಬ ಮಗ ತೇಜ್ ಪ್ರತಾಪ್ ಯಾದವ್, ಅಬ್ದುಲ್ ಬಾರಿ ಸಿದ್ದಿಖಿ, ಬಿಜೇಂದ್ರ ಪ್ರಸಾದ್ ಯಾದವ್ ಸೇರಿದಂತೆ 28 ಮಂದಿ ನಿತೀಶ್ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ರಾಜ್ಯಪಾಲ ಆರ್ ಕೆ ಕೋವಿಂದ್ ಪ್ರತಿಜ್ಞಾವಿಧಿ ಬೋಧಿಸಿದರು.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.