ಚೆನ್ನೈ : ಸುಮಾರು ಕಳೆದ 15 ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದ ತತ್ತರಿಸಿ ಹೋಗಿದ್ದ ತಮಿಳುನಾಡು ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿದಿರುವ ಕಾರಣ ತಮಿಳುನಾಡಿನ ಕರಾವಳಿ, ಪುದುಚೇರಿ ಸೇರಿ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಮಳೆ ಸುರಿಯುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ತಮಿಳುನಾಡು ಕಳೆದ 15 ದಿನಗಳಲ್ಲಿ ಅನುಭವಿ ಸುತ್ತಿರುವ ಮೂರನೇ ವಾಯುಭಾರ ಕುಸಿತ ಇದಾಗಿದೆ.
ರಾಜ್ಯದಲ್ಲಿ ಇತ್ತೀಚಿನ ಮಳೆಗೆ 121 ಮಂದಿ ಬಲಿಯಾಗಿದ್ದು, ಆಸ್ತಿ, ಬೆಳೆ ಹಾನಿ ಸಂಭವಿಸಿದೆ. ಈ ನಡುವೆ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಪೊನ್ ರಾಧಾಕೃಷ್ಣನ್, ಶನಿವಾರ ಚೆನ್ನೈ ಮತ್ತು ಕಾಂಚಿಪುರಂ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಇವರು ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದ್ದಾರೆ.