ಸಿಂಗಾಪುರ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿಂಗಾಪುರದ ಅಧ್ಯಕ್ಷ ಟೋನಿ ಟಾನ್ ಕೆಂಗ್ ಯಾಮ್ ಅವರನ್ನು ಭೇಟಿ ಮಾಡಿದ್ದಾರೆ.
ಕಳೆದ ಸಂಜೆ ಸಿಂಗಾಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಷ್ಠಿತ ಸಿಂಗಾಪುರ್ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದರು. ನಂತರ ಸಿಂಗಾಪುರದ ಪ್ರಧಾನಿ ಲೀ ಸೀನ್ ಲೂಂಗ್ ಅವರ ಜೊತೆ ಲಿಟ್ಲ್ ಇಂಡಿಯಾದ ವಿಲಾಸ್ ರೆಸ್ಟೋರೆಂಟ್ ಗೆ ಭೇಟಿ ನೀಡಿದ್ದರು.
ನಂತರ ಈ ವರ್ಷ ಭಾರತಕ್ಕೆ ಭೇಟಿ ನೀಡಿದ್ದ ಸಿಂಗಾಪುರದ ಅಧ್ಯಕ್ಷ ಯಾಮ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇಂದು ಪ್ರಧಾನಿ ಮೋದಿ ಅವರು ಸಿಂಗಾಪುರದ ಪ್ರಧಾನಿ ಲೀ ಸೀನ್ ಲೂಂಗ್ ಅವರನ್ನೂ ಸಹ ಭೇಟಿ ಮಾಡಲಿದ್ದಾರೆ. ನಂತರ ಇಂಡಿಯನ್ ನ್ಯಾಷನಲ್ ಆರ್ಮಿ ಸ್ಮಾರಕಕ್ಕೆ ಗೌರವ ಸಲ್ಲಿಸಿ, ಭಾರತ- ಸಿಂಗಾಪುರ್ ಆರ್ಥಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ.
ಸಂಜೆ ಪ್ರಧಾನಿ ಅವರು ಸಿಂಗಾಪುರದ ಹೂಡಿಕೆದಾರರನ್ನು ಭೇಟಿ ಮಾಡಲಿದ್ದಾರೆ. ನಂತರ ಭಾರತಕ್ಕೆ ಹಿಂದಿರುಗುವ ಮೊದಲು ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಲಿದ್ದಾರೆ.