Untitled Document
Sign Up | Login    
Dynamic website and Portals
  
December 8, 2015

ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಧರ್ಮಸ್ಥಳದಲ್ಲಿ ಪಾದಯಾತ್ರೆ

ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಹಸ್ರಾರು ಭಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಹಸ್ರಾರು ಭಕ್ತರು

ಬೆಳ್ತಂಗಡಿ : ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಉಜಿರೆಯಿಂದ ಧರ್ಮಸ್ಥಳದವರೆಗೆ ನಡೆದ ಈ ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ದೇಗುಲದ ಆಡಳಿತ ಮುಕ್ತೇಸರ ಪಾದಯಾತ್ರೆ ಸಮಿತಿಯ ಗೌರವಾಧ್ಯಕ್ಷ ವಿಜಯ ರಾಘವ ಪಡ್ವೆಟ್ನಾಯ ದೀಪ ಬೆಳಗಿಸುವುದರ ಮುಖಾಂತರ ಪಾದಯಾತ್ರೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಪ್ರತಾಪ್ ಸಿಂಹ ನಾಯಕ್, ಎಸ್.ಡಿ. ಎಮ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಎಸ್ ಪ್ರಭಾಕರ್, ಕಾರ್ಯದರ್ಶಿ ಡಾ. ಬಿ. ಯಶೋವರ್ಮ, ಧರ್ಮಸ್ಥಳ ಗ್ರಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್. ಎಚ್. ಮಂಜುನಾಥ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಅತ್ಯಂತ ಉತ್ಸಾಹದಿಂದ ಪಾಲ್ಗೊಂಡ ಸದ್‌ಭಕ್ತರಿಗೆ ದಾರಿಯುದ್ದಕ್ಕೂ ಅವಲಕ್ಕಿ, ಐಸ್‌ಕ್ರೀಮ್. ಚಹಾ , ಶರಬತ್ತು, ತಂಪು ಪಾನೀಯಗಳನ್ನು ವಿತರಿಸಲಾಗುತ್ತಿತ್ತು. ನಂತರ ಧರ್ಮಸ್ಥಳದ ಅರ್ಮತವರ್ಷಿಣಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ ಪಾದಯಾತ್ರಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ. ಡಿ. ವೀರೆಂದ್ರ ಹೆಗ್ಗಡೆ ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಸಿಗಲೆಂದು ಹಾರೈಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ:  ಸ್ವಚ್ಚತಾ ಅಭಿಯಾನ
  • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
  • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
  • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
  • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited