ನವದೆಹಲಿ : ಯಾರೊಬ್ಬರ ಮರ್ಜಿಗೆ ಅನುಗುಣವಾಗಿ ಪ್ರಜಾಪ್ರಭುತ್ವವನ್ನು ನಡೆಸಲಾಗದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಗುರುವಾರದ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರಿಗೆ ಏನು ಹೇಳಬೇಕೆಂದೆನಿಸುತ್ತದೆಯೋ ಹೇಳಲಿ ಎಂದು ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸತ್ ನ ಉಭಯ ಕಲಾಪಗಳಿಗೆ ಅಡ್ಡಿ ಮಾಡುತ್ತಿರುವುದಕ್ಕೆ ಗುರುವಾರ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಹೆಸರು ಹೇಳದೆ, ಯಾರೊಬ್ಬರ ಮರ್ಜಿಗೆ ಅನುಗುಣವಾಗಿ ಪ್ರಜಾಪ್ರಭುತ್ವವನ್ನು ನಡೆಸಲಾಗದು ಎಂದು ಹರಿಹಾಯ್ದಿದ್ದರು.