Untitled Document
Sign Up | Login    
Dynamic website and Portals
  
December 19, 2015

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಶನಿವಾರ ನ್ಯಾಯಾಲಯಕ್ಕೆ ಹಾಜರಾಗಲಿರುವ ಸೋನಿಯಾ, ರಾಹುಲ್‌ ಗಾಂಧಿ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಶನಿವಾರ ನ್ಯಾಯಾಲಯಕ್ಕೆ ಹಾಜರಾಗಲಿರುವ ಸೋನಿಯಾ, ರಾಹುಲ್‌ ಗಾಂಧಿ

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಂಚನೆ ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಇತರ ಆರೋಪಿಗಳು ಶನಿವಾರ ಪಟಿಯಾಲ ಹೌಸ್‌ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಒಂದು ವೇಳೆ, ನ್ಯಾಯಾಲಯವೇನಾದರೂ ಬಂಧನಕ್ಕೆ ಆದೇಶಿಸಿದರೆ ಸೋನಿಯಾ, ರಾಹುಲ್‌ ಹಾಗೂ ಇನ್ನಿತರೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ.

ಈ ಕುರಿತು ಮಾತನಾಡಿದ ಆರೋಪಿಗಳಲ್ಲಿ ಒಬ್ಬರಾಗಿರುವ, ಹಿರಿಯ ಕಾಂಗ್ರೆಸ್ಸಿಗ, ಕನ್ನಡಿಗ ಆಸ್ಕರ್‌ ಫ‌ರ್ನಾಂಡಿಸ್‌, ನ್ಯಾಯಾಲಯಕ್ಕೆ ಹಾಜರಾಗುತ್ತೇವೆ. ಕೋರ್ಟ್‌ ಯಾವ ಸೂಚನೆ ನೀಡುತ್ತದೋ ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕಾಶನ ಸಂಸ್ಥೆ ಪರಭಾರೆ ಪ್ರಕರಣದಲ್ಲಿ ಸೋನಿಯಾ, ರಾಹುಲ್‌, ಆಸ್ಕರ್‌ ಅವರಲ್ಲದೆ ಪಕ್ಷದ ಖಜಾಂಚಿ ಮೋತಿಲಾಲ್‌ ವೋರಾ, ಸುಮನ್‌ ದುಬೆ, ಸ್ಯಾಮ್‌ ಪಿತ್ರೋಡಾ ಕೂಡ ಆರೋಪಿಗಳಾಗಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited