Untitled Document
Sign Up | Login    
Dynamic website and Portals
  
December 25, 2015

ಪಾಕಿಸ್ತಾನಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ !

ಪ್ರಧಾನಿ ನರೇಂದ್ರ ಮೋದಿ - ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ (ಸಾಂಧರ್ಭಿಕ ಚಿತ್ರ) ಪ್ರಧಾನಿ ನರೇಂದ್ರ ಮೋದಿ - ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ (ಸಾಂಧರ್ಭಿಕ ಚಿತ್ರ)

ಕಾಬೂಲ್ : ಅಫ್ಘಾನಿಸ್ತಾನದಿಂದ ದೆಹಲಿಗೆ ಹಿಂದಿರುಗುವ ಮಾರ್ಗ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಲಾಹೋರ್ ಗೆ ಭೇಟಿ ನೀಡಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಲಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಪಾಕಿಸ್ತಾನ ಭೇಟಿಯಾಗಿದೆ.

ನವಾಜ್ ಷರೀಫ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲಾಹೋರ್ ಗೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನಕ್ಕೆ ಭಾರತದ ಪ್ರಧಾನಿಯ ಕೊನೆಯ ಭೇಟಿ 2004 ರಲ್ಲಿ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರದ್ದಾಗಿತ್ತು.

ಮಾಸ್ಕೋದಿಂದ ಇಂದು ಬೆಳಗ್ಗೆ ಕಾಬೂಲ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ, ದೆಹಲಿಗೆ ಹಿಂದಿರುಗುವಾಗ ಲಾಹೋರ್ ನಲ್ಲಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡುವುದಾಗಿ ಟ್ವೀಟ್ ಮಾಡಿ ಅಚ್ಚರಿ ಮೂಡಿಸಿದ್ದರು. ಇದೊಂದು ಇದ್ದಕ್ಕಿದ್ದಂತೆ ನಡೆದ ಬೆಳವಣಿಗೆಯಾಗಿದೆ.

ಜಿಯೋ ನ್ಯೂಸ್ ವರದಿ ಪ್ರಕಾರ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಪ್ರಧಾನಿ ನರೇಂದ್ರ ಮೊದಿ ಅವರನ್ನು ಲಾಹೋರ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ರಾಜ್ಯಪಾಲರ ನಿವಾಸಕ್ಕೆ ಕರೆದೊಯ್ಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ತಾಸು ಪಾಕಿಸ್ತಾನದಲ್ಲಿ ಇರಲಿದ್ದಾರೆ ಎಂದು ವರದಿ ತಿಳಿಸಿದೆ.

 

 

English Summary : In a surprising development, Prime minister Narednra Modi told he will visit Lahore today and will meet Pakistani counterpart Nawaz Sharif on his way back to Delhi from Afganistan

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited