ನವದೆಹಲಿ : ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಕ್ರಿಶ್ಚಿಯನ್ ಘಟಕ ಸ್ಥಾಪನೆಗೆ ಚಿಂತನೆ ನಡೆಸಿದ್ದು, ಈ ಸಂಬಂಧ ಕ್ರಿಶ್ಚಿಯನ್ ನಾಯಕರೊಂದಿಗೆ ಸಭೆ ಸಹ ನಡೆಸಿದೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ದಶಕಗಳ ಹಿಂದೆ ಸ್ಥಾಪನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ ಮಾದರಿಯಲ್ಲಿ ಕ್ರಿಶ್ಚಿಯನ್ ಘಟಕ ಸ್ಥಾಪನೆಗೆ ಆರ್ಎಸ್ಎಸ್ ಮುಂದಾಗಿದ್ದು, ಇದಕ್ಕೆ ಇನ್ನೂ ಹೆಸರು ಅಂತಿಮವಾಗಿಲ್ಲ.
ಮುಸ್ಲಿಂ ರಾಷ್ಟ್ರೀಯ ಮಂಚ್ನ ಮಾರ್ಗದರ್ಶಕರಾಗಿರುವ ಆರ್ಎಸ್ಎಸ್ನ ಹಿರಿಯ ಪ್ರಚಾರಕರೊಬ್ಬರು ಕ್ರಿಶ್ಚಿಯನ್ ಘಟಕ ಸ್ಥಪಾನೆಯನ್ನು ಖಚಿತಪಡಿಸಿದ್ದು, ಈ ಸಂಬಂಧ ಡಿಸೆಂಬರ್ 17, 2015ರಂದು ಕ್ರಿಶ್ಚಿಯನ್ ನಾಯಕರೊಂದಿಗೆ ಸಭೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.