Untitled Document
Sign Up | Login    
Dynamic website and Portals
  
January 12, 2016

ಶಬರಿಮಲೈ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸುಪ್ರೀಂ ಆಕ್ಷೇಪ

ಶಬರಿಮಲೈ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸುಪ್ರೀಂ ಆಕ್ಷೇಪ

ನವದೆಹಲಿ : ಶಬರಿಮಲೈ ದೇವಸ್ಥಾನದಲ್ಲಿ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನಿಷೇಧವಿರುವ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ದೇವಸ್ಥಾನಆಡಳಿತ ಮಂಡಳಿಯನ್ನು ಪ್ರಶ್ನಿಸಿದೆ.

ಮಹಿಳಾ ವಕೀಲೆರೊಬ್ಬರು 10 ವರ್ಷಗಳ ಹಿಂದೆ ಮಹಿಳೆಯರಿಗೆ ಪ್ರವೇಶ ಇಲ್ಲದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಎನ್.ವಿ. ರಮಣ ಅವರಿದ್ದ ದ್ವಿಸದಸ್ಯ ನ್ಯಾಯಪೀಠ, ಧಾರ್ವಿುಕ ಆಧಾರ ಹೊರತುಪಡಿಸಿ ಉಳಿದ ನೆಲೆಗಟ್ಟಿನಲ್ಲಿ ಪ್ರವೇಶ ನಿರಾಕರಿಸುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ದೇವಸ್ಥಾನದ ಆಡಳಿತ ಮಂಡಳಿಯ ಪರವಾಗಿ ಹಿರಿಯ ನ್ಯಾಯವಾದಿ ಕೆ ಕೆ ವೇಣುಗೋಪಾಲ್ ಮಾತನಾಡಿ, ಇದು ಧಾರ್ಮಿಕ ಭಾವನೆಯಾದ್ದರಿಂದ ನ್ಯಾಯಾಲಯವಾಗಲಿ ಅಥವಾ ಸರ್ಕಾರವಾಗಲಿ ಮಧ್ಯೆ ಪ್ರವೇಶಿಸಲಾಗುವುದಿಲ್ಲ ಎಂದು ವಾದ ಮಂಡಿಸಿದರು.

ವಿಚಾರಣೆಯನ್ನು ಫೆ. 8 ಕ್ಕೆ ಮುಂದೂಡಿದ ನ್ಯಾಯಪೀಠ, ಶಬರಿಮಲೆಯೊಂದು ಸಾರ್ವಜನಿಕ ದೇವಾಲಯವಾಗಿರುವುದರಿಂದ ಅದರೊಳಗೆ ಪ್ರವೇಶಿಸಲು ಎಲ್ಲರಿಗೂ ಅವಕಾಶವಿರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited