ಜಕಾರ್ತಾ : ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದ ಮಧ್ಯಭಾಗದಲ್ಲಿ ಗುರುವಾರ ಬೆಳಗ್ಗೆ ಉಗ್ರರು ಸರಣಿ ಬಾಂಬ್ ಸ್ಫೋಟ ನಡೆಸಿದ್ದಾರೆ. ದಾಳಿಯಲ್ಲಿ ಕನಿಷ್ಟ 6 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಪೊಲೀಸರು ಮತ್ತು ಉಗ್ರರ ಮಧ್ಯೆ ಗುಂಡಿನ ಚಕಮಕಿ ಮುಂದುವರಿದೆದೆ.
ನಗರದ ವಿಶ್ವ ಸಂಸ್ಥೆ ಕಚೇರಿಯ ಹತ್ತಿರದ ಜನ ನಿಬಿಡ ಪ್ರದೇಶಗಳಲ್ಲಿ ಶಸ್ತ್ರಧಾರಿ ಉಗ್ರರು 6 ಕಡೆಗಳಲ್ಲಿ ಬಾಂಬ್ ಸ್ಫೋಟಿಸಿದ್ದಾರೆ. ದಾಳಿಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಫೆಯೊಂದರ ಬಳಿ ಬಾಂಬ್ ಸಿಡಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಳಿಕ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಪೊಲೀಸ್ ಅಧಿಕಾರಿ ಬಲಿಯಾಗಿದ್ದಾರೆ.
14 ಕ್ಕೂ ಹೆಚ್ಚು ಮಂದಿ ಉಗ್ರರು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ. ಐ ಎಸ್ ಐ ಎಸ್ ಉಗ್ರರು ಈ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಕೆಲದಿನಗಳ ಹಿಂದೆ ಇಂಡೋನೇಷ್ಯಾ ತಮ್ಮ ಮುಂದಿನ ಗುರಿ ಎಂದು ಐ ಎಸ್ ಐ ಎಸ್ ಬೆದರಿಕೆ ಹಾಕಿದ್ದರು.