ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ, ಅಮಿತ್ ಶಾ ಅವರನ್ನು ಎರಡನೇ ಬಾರಿಗೆ ಭಾನುವಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಅಮಿತ್ ಶಾ ಅವರ ಅವಧಿ ಶನಿವಾರಕ್ಕೆ ಮುಕ್ತಾಯಗೊಂಡಿದ್ದು, ಭಾನುವಾರ ಅವರು ಮತ್ತೆ 3 ವರ್ಷಗಳ ಅವಧಿಗೆ ಪುನರಾಯ್ಕೆ ಮಾಡಲಾಗಿದೆ. ಪಕ್ಷದ ಮುಖಂಡರ ಸಮ್ಮುಖದಲ್ಲಿ ಅಮಿತ್ ಶಾ ಅವರನ್ನು ಎರಡನೇ ಬಾರಿಗೆ ಬಿಜೆಪಿ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಭಾನುವಾರ ಆಯ್ಕೆ ಮಾಡಲಾಯಿತು.
ಈ ಹಿಂದೆ ಪಕ್ಷದ ಅಧ್ಯಕ್ಷರಾಗಿದ್ದ ರಾಜ್ನಾಥ್ ಸಿಂಗ್ ಅವರು 2014 ರಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನಂತರ, ಅಮಿತ್ ಶಾ ಅವರು ಪಕ್ಷದ ಅಧ್ಯಕ್ಷ ಗಾದಿಯನ್ನು ವಹಿಸಿಕೊಂಡಿದ್ದರು.
ಅಮಿತ್ ಶಾ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ದಿಲ್ಲಿ ಮತ್ತು ಬಿಹಾರದಲ್ಲಿ ಪಕ್ಷ ಸೋಲು ಕಂಡಿದ್ದರೂ ಮಹಾರಾಷ್ಟ್ರ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷ ಅಧಿಕಾರದ ಗದ್ದುಗೆ ಏರಿತ್ತು. ಮತ್ತೂಂದೆಡೆ ಹೆಚ್ಚಿನ ಅಸ್ತಿತ್ವ ಇಲ್ಲದ ಕೇರಳ, ಅಸ್ಸಾಂ, ಪಶ್ಚಿಮ ಬಂಗಾಲದಲ್ಲಿ ನೆಲೆಯೂರುವಲ್ಲಿ ಪಕ್ಷ ಯಶಸ್ವಿಯಾಗಿತ್ತು.
ಹೊಸ ಅವಧಿಗೆ ಆಯ್ಕೆ ಆಗಿರುವ ಅಮಿತ್ ಶಾ ಅವರನ್ನು ಸ್ವಾಗತಿಸಲು ಬಿಜೆಪಿ ಸಂಸದೀಯ ಮಂಡಳಿ ಜ. 28 ರಂದು ಸಭೆ ಸೇರಲಿದೆ.