Untitled Document
Sign Up | Login    
Dynamic website and Portals
  
February 1, 2016

ಗೋಪಾಲನ್ ಮಾಲ್‍ನಲ್ಲಿ ಅಗ್ನಿ ಅವಘಡ

BW News Bureau : ರಾಜರಾಜೇಶ್ವರಿ ನಗರದಲ್ಲಿರುವ ಗೋಪಾಲನ್ ಮಾಲ್‍ನಲ್ಲಿ ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬೆಂಕಿ ತೀವ್ರತೆ ಹೆಚ್ಚಾಗಿದ್ದು, ನೆಲಮಹಡಿ ಹಾಗೂ ಮೊದಲ ಮಹಡಿಗೆ ಬೆಂಕಿ ಆವರಿಸಿಕೊಂಡಿತ್ತು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 4 ವಾಹನ, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಾಯದಿಂದ ಅಗ್ನಿಯನ್ನು ನಂದಿಸಲಾಗಿದೆ ಎಂದು ಕರ್ನಾಟಕ ಅಗ್ನಿಶಾಮಕ ದಳ ಹೇಳಿದೆ.

ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಈ ಅವಗಡದಿಂದ ಮಾಲ್ ಬಳಿಯ ಮೈಸೂರು ರಸ್ತೆಯಲ್ಲಿ ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited