Untitled Document
Sign Up | Login    
Dynamic website and Portals
  
February 5, 2016

ಹಿರಿಯ ಸಾಹಿತಿ ಸಾ.ಶಿ.ಮರುಳಯ್ಯ ನಿಧನ

ಬೆಂಗಳೂರು : ಹಿರಿಯ ಸಾಹಿತಿ ಸಾ.ಶಿ.ಮರುಳಯ್ಯ ಅವರು ಶುಕ್ರವಾರ ಬೆಳಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ಪ್ರಾಯವಾಗಿತ್ತು.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮರುಳಯ್ಯ ಅವರನ್ನು ಜನವರಿ 22 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಶುಕ್ರವಾರ ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳದಿದ್ದಾರೆ

ಮರಣಾ ನಂತರ ದೇಹದಾನ ಮಾಡಬೇಕೆಂದು ಮರುಳಯ್ಯ ಅವರು ಪತ್ರ ಬರೆದಿರುವ ಹಿನ್ನಲೆಯಲ್ಲಿ ಅವರ ದೇಹವನ್ನು ದಾನ ಮಾಡಲಾಗುತ್ತಿದೆ.

1931ರಲ್ಲಿ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಸಾಸಲು ಗ್ರಾಮದಲ್ಲಿ ಜನಿಸಿದ್ದ ಸಾ.ಶಿ. ಮರುಳಯ್ಯ ಅವರು ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರಾಗಿ ಕನ್ನಡದಲ್ಲಿ ವಿಶಿಷ್ಟ ಪರಂಪರೆಯನ್ನು ಹುಟ್ಟಿಹಾಕಿದ್ದರು.

1956 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಕನ್ನಡ ಎಂ.ಎ. ಪದವಿ ಯನ್ನು, 1971 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಕೆಳದಿಯ ಅರಸರು ಮತ್ತು ಕನ್ನಡ ಸಾಹಿತ್ಯ ಕುರಿತ ಮಹಾ ಪ್ರಬಂಧಕ್ಕೆ ಪಿ.ಎಚ್.ಡಿ. ಪದವಿಯನ್ನೂ ಪಡೆದಿದ್ದರು.

ಚಾಮರಾಜನಗರ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚನ್ನಪಟ್ಟಣ, ಮಂಗಳೂರು, ಬೆಂಗಳೂರಿನ ಕಾಲೇಜುಗಳಲ್ಲಿ ಅಧ್ಯಾಪಕರಾಗಿ, ಪ್ರಾಂಶುಪಾಲರಾಗಿ, ಪ್ರವಾಚಕರಾಗಿ, ಪ್ರಾಧ್ಯಾಪಕರಾಗಿ,ಮೂವತ್ತು ವರ್ಷಗಳ ಬೋಧನಾನುಭವವನ್ನು ಹೊಂದಿದ್ದರು.

ಆಡಳಿತಾನುಭವವನ್ನು ಹೊಂದಿರುವ ಅವರ ಅಧ್ಯಯನ ಬರವಣಿಗೆಗಳಲ್ಲಿ ಆಳ ಹರಹುಗಳಿದ್ದವು.
ಕಾವ್ಯ, ಪ್ರಹಸನ, ಜೀವನ ಚಿತ್ರಣ, ಕಾದಂಬರಿ, ಸಣ್ಣಕಥೆ, ನಾಟಕ, ವಿಮರ್ಶೆ, ಸಂಶೋಧನೆ, ಜಾನಪದ, ವ್ಯಾಕರಣ ಮುಂತಾದ ಪ್ರಕಾರಗಳಲ್ಲಿ ನೂರಕ್ಕೂ ಹೆಚ್ಚು ಕೃತಿಗಳನ್ನು,40ಕ್ಕೂ ಹೆಚ್ಚು ನೃತ್ಯ ರೂಪಕಗಳನ್ನುಪ್ರಕಟಿಸಿದ್ದರು.

1995 ರಿಂದ 98 ರ ವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಯೂ ಕಾರ್ಯ ನಿರ್ವಹಿಸಿದ್ದರು.

ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಗಳು ಮರುಳಯ್ಯ ಅವರಿಗೆ ಲಭಿಸಿದ್ದವು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited