ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಪಕ್ಷ, ಬಿಜೆಪಿ, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿದ್ದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ.
ಇದರಲ್ಲಿ ಹೆಬ್ಬಾಳ, ದೇವದುರ್ಗದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದರೆ, ಬೀದರ್ ನಲ್ಲಿ ಕಾಂಗ್ರೆಸ್ ಗೆಲುವಿನ ನಗು ಬೀರಿದೆ. ಪಟ್ಟು ಹಿಡಿದು ಮೊಮ್ಮಗ ರಹಮಾನ್ ಷರೀಫ್ ಗೆ ಹೆಬ್ಬಾಳ ಕ್ಷೇತ್ರದ ಟಿಕೆಟ್ ಕೊಡಿಸಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಸಿ ಕೆ ಜಾಫರ್ ಷರೀಫ್ ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಹೆಬ್ಬಾಳದಲ್ಲಿ ಬಿಜೆಪಿಯ ವೈ ಎ ನಾರಾಯಣಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದರೆ, ದೇವದುರ್ಗದಲ್ಲಿ ಶಿವನಗೌಡ ನಾಯಕ್ ಹಾಗೂ ಬೀದರ್ ನಲ್ಲಿ ಕಾಂಗ್ರೆಸ್ ನ ರಹೀಂಖಾನ್ ಗೆಲುವು ಸಾಧಿಸಿದ್ದಾರೆ.
ಶಾಸಕರ ಅಕಾಲಿಕ ನಿಧನದಿಂದಾಗಿ ಹೆಬ್ಬಾಳ, ಬೀದರ್ ಮತ್ತು ದೇವದುರ್ಗ ವಿಧಾನಸಭಾ ಕ್ಷೇತ್ರಗಳಿಗೆ ಫೆ.13ರಂದು ಉಪಚುನಾವಣೆ ನಡೆದಿತ್ತು. ಮಂಗಳವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿತ್ತು.