Untitled Document
Sign Up | Login    
Dynamic website and Portals
  
March 22, 2016

ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ನಲ್ಲಿ ಸರಣಿ ಬಾಂಬ್ ಸ್ಪೋಟ

ಬ್ರಸೆಲ್ಸ್ : ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ನಲ್ಲಿ ವಿಮಾನ ನಿಲ್ದಾಣ, ಮೆಟ್ರೋ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದ ಸರಣಿ ಬಾಂಬ್‌ ಸ್ಫೋಟದಲ್ಲಿ ಈವರೆಗೆ 28 ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಟರ್ಮಿನಲ್‌ನಿಂದ ಸ್ಫೋಟದ ಭಾರೀ ಶಬ್ಧ ಕೇಳುತ್ತಿದ್ದಂತೆ ದಟ್ಟ ಹೊಗೆ ವಿಮಾನ ನಿಲ್ದಾಣದಲ್ಲಿ ಆವರಿಸಿದೆ. ಈ ವೇಳೆ ಜನರು ಪ್ರಾಣ ಭಯದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.

2 ಬಾಂಬ್‌ಗಳು ಮೊದಲು ಡಿಪಾರ್ಚರ್‌ ಟರ್ಮಿನಲ್‌ನ ಹೊರಭಾಗದಲ್ಲಿ ಸ್ಫೋಟಗೊಂಡಿದ್ದರೆ, ಕೆಲ ಹೊತ್ತಿನ ಬಳಿಕ ಇನ್ನೊಂದು ಬಾಂಬ್‌ ಮೆಟ್ರೋ ರೈಲು ನಿಲ್ದಾಣದಲ್ಲಿ ಸ್ಫೋಟಗೊಂಡಿದೆ. ತಪಾಸಣೆಯ ವೇಳೆ ಇನ್ನೂ ಕೆಲ ಬಾಂಬ್‌ಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಬ್ರಸೆಲ್ಸ್ವಿಮಾನ ನಿಲ್ದಾಣದಲ್ಲಿ ನಡೆದ ಸ್ಫೋಟಗಳಲ್ಲಿ 13 ಜನ , ಮೆಟ್ರೋ ನಿಲ್ದಾಣದಲ್ಲಿ ನಡೆದ ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿದ್ದು 55ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಫೋಟ ನಡೆದ ಕೂಡಲೇ ವಿಮಾನ ನಿಲ್ದಾಣ ಬಂದ್‌ ಮಾಡಲಾಗಿದ್ದು, ಮೆಟ್ರೋ ರೈಲಿನ ಸಂಚಾರ, ವಿಮಾನಗಳ ಸಂಚಾರ ಸಂಪೂರ್ಣ ನಿಲ್ಲಿಸಲಾಗಿದೆ.

ಬೆಲ್ಜಿಯಂ ಪೊಲೀಸರು ಇಬ್ಬರು ಆತ್ಮಾಹುತಿ ಬಾಂಬರ್ ಗಳ ಭಾವಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಇವರಿಬ್ಬರೂ ಪ್ಯಾರಿಸ್ ದಾಳಿಯಲ್ಲಿ ಕೂಡ ಬಾಗಿಯಾಗಿದ್ದರೆಂದು ಶಂಕಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬ್ರಸೆಲ್ಸ್ ಭಾರತೀಯ ರಾಯಭಾರ ಕಚೇರಿ ಸಂಪರ್ಕದಲ್ಲಿದ್ದೇವೆ. ಯಾವುದೇ ಭಾರತೀಯರೂ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡ ವರದಿಯಾಗಿಲ್ಲ. ಆದರೆ ಜೆಟ್ ಏರ್ವೇಸ್ ನ ಭಾರತೀಯ ಮಹಿಳಾ ಸಿಬ್ಬಂದಿಯೊಬ್ಬರು ಗಾಯಗೊಂಡದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.


ಬ್ರಸೆಲ್ಸ್ ಭಾರತೀಯ ರಾಯಭಾರ ಕಚೇರಿಯ ಸಹಾಯವಾಣಿ :
+32-26409140
+32-26451850 (PABX) &
+32-476748575 (mobile) Pl RT

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited