Untitled Document
Sign Up | Login    
Dynamic website and Portals
  
March 25, 2016

ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಮರುಪರೀಕ್ಷೆ ಮಾರ್ಚ್ 31 ಕ್ಕೆ

ಬೆಂಗಳೂರು : ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆ, ಮಾ. 29ರ ಬದಲು ಮಾ. 31ರಂದು ನಡೆಯಲಿದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ವಿದ್ಯಾರ್ಥಿಗಳ ಒತ್ತಾಯಕ್ಕೆ ಸರ್ಕಾರ ಮಣಿದಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹಾಗೂ ವಿಧಾನ ಪರಿಷತ್‌ ಉಪಸಭಾಪತಿ ಮರಿತಿಬ್ಬೇಗೌಡ ಅವರ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ವಿವಿಧ ಜನಪ್ರತಿನಿಧಿಗಳ ಸಭೆಯಲ್ಲಿ ಮರು ಪರೀಕ್ಷೆ ದಿನಾಂಕ ಮುಂದೂಡುವ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಮಾ. 21ರಂದು ನಡೆದ ರಸಾಯನಶಾಸ್ತ್ರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಆ ವಿಷಯದ ಪರೀಕ್ಷೆ ರದ್ದುಪಡಿಸಿ ಮಾ. 29ಕ್ಕೆ ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಇದಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಜೊತೆಗೆ ಸದನದಲ್ಲೂ ಪರೀಕ್ಷಾ ದಿನಾಂಕ ಮುಂದೂಡುವಂತೆ ವಿವಿಧ ಜನಪ್ರತಿನಿಧಿಗಳು ಒತ್ತಾಯಿಸಿದ್ದರು

ಈ ಎಲ್ಲಾ ಕಾರಣಗಳಿಂದ ಸರ್ವ ಪಕ್ಷಗಳ ವಿಧಾನ ಪರಿಷತ್‌ ಸದಸ್ಯರ ಸಭೆ ಕರೆದು ಚರ್ಚಿಸಿ ಮರು ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲು ನಿರ್ಧಾರ ಕೈಗೊಳ್ಳಲಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಈ ಸಂಬಂಧ ಸೂಕ್ತ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾದ ಪ್ರಮಾದಕ್ಕೆ ಇದೇ ವೇಳೆ ವಿದ್ಯಾರ್ಥಿಗಳು ಹಾಗೂ ಪೋಷಕರ ಕ್ಷಮೆ ಯಾಚಿಸಿದ ಸಚಿವರು, ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಯಾರದ್ದೇ ಕೈವಾಡವಿದ್ದರೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪಿಯುಸಿ ಗಣಿತ ಪತ್ರಿಕೆ ಸೋರಿಕೆಯಾಗಿದೆ ಎಂಬುದನ್ನು ಅಲ್ಲಗಳೆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಇದು ಕೇವಲ ವದಂತಿ. ಅಲ್ಲದೆ, ಆ ಪ್ರಶ್ನೆ ಪತ್ರಿಕೆಯಲ್ಲಿ ಸಿಲೆಬಸ್‌ ಹೊರತಾದ ಯಾವುದೇ ಪ್ರಶ್ನೆಗಳನ್ನೂ ಕೇಳಲಾಗಿಲ್ಲ. ಹಾಗಾಗಿ ಗಣಿತ ವಿಷಯಕ್ಕೆ ಮರುಪರೀಕ್ಷೆ ನಡೆಸುವ ಅಥವಾ ಹೆಚ್ಚುವರಿ ಅಂಕ ನೀಡುವ ಪ್ರಮೇಯ ಇಲ್ಲ ಎಂದು ಸ್ಪಷ್ಟಪಡಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited