Untitled Document
Sign Up | Login    
Dynamic website and Portals
  
March 30, 2016

ವಕ್ಫ್ ಮಂಡಳಿ ಆಸ್ತಿ ಕಬಳಿಕೆ ವಿಚಾರ: ವರದಿ ನೀಡುವಂತೆ ಸಿಎಂಗೆ ರಾಜ್ಯಪಾಲರ ಗಡುವು

ಬೆಂಗಳೂರು : ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತು ವರದಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸೂಚನೆ ನೀಡಿದ್ದಾರೆ.

ವಕ್ಫ್ ಆಸ್ತಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನಪರಿಷತ್ ನಲ್ಲಿ ಮಂಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮಂಗಳವಾರ ರಾಜ್ಯಪಾಲರಿಗೆ ದೂರು ನೀಡಿದ್ದವು.

ಈ ದೂರಿನ ಹಿನ್ನೆಲೆಯಲ್ಲಿ ಇದೀಗ ವಕ್ಫ್ ಮಂಡಳಿ ಆಸ್ತಿ ಕಬಳಿಗೆ ಕುರಿತ ವರದಿಯನ್ನು 24 ಗಂಟೆಯೊಳಗೆ ನೀಡುವಂತೆ ರಾಜ್ಯಪಾಲರು ಸಿಎಂಗೆ ಸೂಚನೆ ನೀಡಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ದಿನದಲ್ಲಿ ವರದಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ವಕ್ಫ್ ಆಸ್ತಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ವರದಿ ಮಂಡಿಸದೇ ಇರುವುದು ಸಾಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ರಾಜ್ಯಪಾಲರು ಕಳವಳ ವ್ಯಕ್ತಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited