ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರ ಪತ್ನಿ ಕಮಲಾ ಅಡ್ವಾಣಿ ಅವರು ಹೃದಯಾಘಾತದಿಂದ ಬುದವಾರ ಸಂಜೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಕಮಲಾ ಅಡ್ವಾಣಿ ಅವರಿಗೆ ಎದೆನೋವು ಕಾಣಿಸಿದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೃದಯಾಘಾತದಿಂದ ಬುಧವಾರ ಸಂಜೆ ವಿಧಿವಶ ಹೊಂದಿದರು ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಮಲಾ ಅಡ್ವಾಣಿಯವರನ್ನು ಕಳೆದ ಡಿಸೆಂಬರ್‌ನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಮಲಾ ಅಡ್ವಾಣಿಯವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ.