Untitled Document
Sign Up | Login    
Dynamic website and Portals
  
April 11, 2016

ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಎರಡನೇ ಹಂತದ ಚುನಾವಣೆ

ನವದೆಹಲಿ : ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಸೋಮವಾರ ಎರಡನೇ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಈ ವರೆಗೂ ಪಶ್ಚಿಮ ಬಂಗಾಳದಲ್ಲಿ ಶೇ.20, ಅಸ್ಸಾನಲ್ಲಿ ಶೇ.15.90 ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳದ 31. ಅಸ್ಸಾಂನ 61 ಕ್ಷೇತ್ರಗಳಿಗೆ 2ನೇ ಹಂತದ ವಿಧಾನಸಭೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಚುನಾವಣಾ ಪ್ರಕ್ರಿಯೆ ಸುಮಾರು 1 ತಿಂಗಳ ಕಾಲ ನಡೆಯಲಿದೆ. ಪಶ್ಚಿಮ ಬಂಗಾಳದ ಪಶ್ಚಿಮ ಮೇದಿನಿಪುರ್, ಬಂಕುರಾ ಮತ್ತು ಬುರ್ದ್ವಾನ್ ಜಿಲ್ಲೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲಿನ 18 ಕ್ಷೇತ್ರಗಳಲ್ಲಿ 133 ಅಭ್ಯರ್ಥಿಗಳು ಕಣದಲ್ಲಿಳಿದಿದ್ದು, ಪಶ್ಚಿಮ ಬಂಗಾಳದಲ್ಲಿ ಒಟ್ಟು 6 ಹಂತಗಳಲ್ಲಿ ಚುನಾವಣೆ ನಡೆಸಲಿದೆ. ಅಸ್ಸಾಂ ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ ಪೂರ್ಣಗೊಳ್ಳಲಿದೆ. 70 ಲಕ್ಷಕ್ಕೂ ಹೆಚ್ಚು ಜನರು ಮತದಾನದಲ್ಲಿ ಭಾಗವಿಸುತ್ತಿದ್ದು, ಚುನಾವಣೆ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿನ 31 ಕ್ಷೇತ್ರಗಳಲ್ಲಿ 21 ಮಹಿಳೆಯರು ಸೇರಿ 163 ಅಭ್ಯರ್ಥಿಗಳು ಕಣದಲ್ಲಿಳಿದಿದ್ದು, ಪಶ್ಚಿಮ ಬಂಗಾಳದಲ್ಲಿ ಒಟ್ಟು 6 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಸ್ಸಾಂ ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ ಪೂರ್ಣಗೊಳ್ಳಲಿದೆ

2011ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷದ ಜೊತೆ ಕಾಂಗ್ರೆಸ್ ಕೈ ಜೋಡಿಸಿತ್ತು. ಅಂದು ನಡೆದ ಚುನಾವಣೆಯಲ್ಲಿ ರಾಜ್ಯದಲ್ಲಿ 34 ವರ್ಷಗಳ ಎಡಪಕ್ಷಗಳ ಆಳ್ವಿಕೆ ಅಂತಿಮಗೊಂಡಿತ್ತು. ನಂತರ ದಿನಗಳಲ್ಲಿ ಟಿಎಂಸಿ ಪಕ್ಷದ ಜತೆಗಿನ ಸಂಬಂಧವನ್ನು ಕಾಂಗ್ರೆಸ್ ಕಡಿದುಕೊಂಡಿತ್ತು. ಇದೀಗ ಎಡಪಕ್ಷಗಳ ಜೊತೆ ಕೈಜೋಡಿಸಿರುವ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಂಡು ಮಮತಾ ಬ್ಯಾನರ್ಜಿಯವರನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited