Untitled Document
Sign Up | Login    
Dynamic website and Portals
  
April 17, 2016

ಈಕ್ವೆಡಾರ್ ನಲ್ಲಿ ಭೂಕಂಪ: ಪ್ರಧಾನಿ ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಅಮೆರಿಕಾದ ಈಕ್ವೆಡಾರ್ ನಲ್ಲಿ ಸಂಭವಿಸಿರುವ ಪ್ರಬಲ ಭೂಕಂಪ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭೂಕಂಪದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ಘಟನೆ ವೇಳೆ ಗಾಯಗೊಂಡವರು ಶೀಘ್ರದಲ್ಲಿ ಗುಣಮುಖರಾಗರಾಗಲಿ. ಭೂಕಂಪದಲ್ಲಿ ಸಂಭವಿಸಿರುವ ಆಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಹಾನಿ ಕಡಿಮೆ ಮಟ್ಟದ್ದಾಗಿರಲಿ ಎಂದು ಭಯಸುತ್ತೇನೆಂದು ಹೇಳಿದ್ದಾರೆ.

ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ರಾಜಧಾನಿ ಕ್ವಿಟೋ ಕರಾವಳಿ ತೀರದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಫೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಸುನಾಮಿ ಸಂಭವಿಸುವ ಕುರಿತು ಎಚ್ಚರಿಕೆ ರವಾನಿಸಿದೆ. ಭೂಕಂಪದ ಪರಿಣಾಮ ಈಕ್ವೆಡಾರ್ ನಲ್ಲಿ ಹಲವು ಕಟ್ಟಡಗಳು ನೆಲಕ್ಕುರುಳಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited